ಹಾಸನ-ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆದಿರುವ ಜಮೀನನ್ನು ಗುತ್ತಿಗೆ ಪಡೆಯಲು ಅರ್ಜಿ ಸಲ್ಲಿಸಲು ಡಿ.31ರವರೆಗೆ ಅವಕಾಶ

ಹಾಸನ-ಸರ್ಕಾರದ ಸುತ್ತೋಲೆ ಸಂ.ಆರ್.ಡಿ 07 ಎಲ್.ಜಿ.ಪಿ 2023 ದಿನಾಂಕ 12.3.2024 ಹಾಗೂ ಆರ್.ಡಿ07 ಎಲ್.ಜಿ.ಪಿ 2023 ದಿ 25.10.2024ರಂತೆ 1.01.2005 ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆದಿರುವ ಜಮೀನನ್ನು ಗುತ್ತಿಗೆ ನೀಡುವ ಬಗ್ಗೆ ನಿಗಧಿತ ನಮೂನೆ-9ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಡಿ.31 ರವರೆಗೆ ಕಾಲಾವಧಿಯನ್ನು ನೀಡಲಾಗಿರುತ್ತದೆ.

ಸದರಿ ಅವಧಿಯಲ್ಲಿ ಅರ್ಜಿಗಳನ್ನು ಸಂಬoಧಿಸಿದ ತಾಲ್ಲೂಕಿನ ತಹಸೀಲ್ದಾರ್ ರವರ ಕಚೇರಿಗೆ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಹಾಸನ ಜಿಲ್ಲೆಯ ಅರಕಲಗೂಡು,ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕುಗಳ ತಹಸೀಲ್ದಾರ್ ಕಚೇರಿ ಹಾಗೂ ನಾಡ ಕಚೇರಿಗಳಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆದಿರುವ ಜಮೀನನ್ನು ಗುತ್ತಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಸ್ವೀಕರಿಸಲು ಡಿ.31 ರೊಳಗಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಪ್ಲಾಂಟೇಷನ್ ಜಮೀನು ಒತ್ತುವರಿದಾರರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?