ಹಾಸನ- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-೦6, “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೫೦ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ದಿನಾಂಕ : 02-೦4-2025 ರ ಒಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ, ಮೈಸೂರು-06 ಆವರಣದಲ್ಲಿರುವ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ಕಛೇರಿಯಲ್ಲಿ ಬೆಳಿಗ್ಗೆ 10.೦೦ ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಹಾಸನ ಪ್ರಾದೇಶಿಕ ಕೇಂದ್ರದ ವತಿಯಿಂದ ಪ್ರಕಟಣೆಯನ್ನು ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.