ಹಾಸನ- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ತಾಲ್ಲೂಕಿನ ಆನೆ ಮಹಲ್ ಹಾಗೂ ದೊಡ್ಡತಪ್ಪಲು ಪ್ರದೇಶದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳು ಹಾಗೂ ಮಣ್ಣು ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಅವರು ಕೆಲಸ ವೇಗವಾಗಿ ಆಗಬೇಕಿತ್ತು, ಹಿಂದಿನ ಬಾರಿಗೂ ಈಗಿಗೂ ಗಮನಿಸಿದರೆ ಕೆಲಸ ಆಗಿದೆ ಎರಡು-ಮೂರು ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರಿಕೆವಹಿಸಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ ಮಣ್ಣು ಕುಸಿಯದಂತೆ ಹಂತ ಹಂತವಾಗಿ ತಡೆಗೋಡೆ ನಿರ್ಮಾಣ ಮಾಡಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.
ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ಭೂ ಸ್ವಾಧೀನಕ್ಕೆ ಈಗಾಗಲೇ ಪರಿಹಾರ ನೀಡಲಾಗಿದೆ. ಮನೆ ಮಾಲೀಕರು ಎಚ್ಚರಿಕೆ ವಹಿಸಿ ಮನೆಗಳನ್ನು ತೆರೆವುಗೊಳಿಸುವ ಕಾರ್ಯವಾಗಬೇಕು ಎಂದುಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಸಿಮೆಂಟ್ ಮಂಜು, ಹೆಚ್.ಕೆ.ಸುರೇಶ್, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಉಪ ವಿಭಾಗಾಧಿಕಾರಿ ಶೃತಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಪ್ರವೀಣ್ ಇತರರು ಹಾಜರಿದ್ದರು.