ಹಾಸನ-ಮಾ.11 ರಂದು-ವಿವಿಧ-ಹುದ್ದೆಗಳಿಗೆ-ನೇರ-ಸಂದರ್ಶನ

ಹಾಸನ – ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಮಾ.11 ರಂದು ಮಂಗಳವಾರ ಬೆಳಗ್ಗೆ 10 ರಿಂದ 1.30 ಗಂಟೆವರೆಗೆ ವಿವಿಧ ಖಾಸಗೀ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣ, ಹಾಸನ ಇಲ್ಲಿ ಆಯೋಜಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳ ವಿದ್ಯಾರ್ಹತೆ ಐ.ಟಿ.ಐ/ ಪಿ.ಯು.ಸಿ/ ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆ ಹೊಂದಿದ ಪುರುಷ/ಮಹಿಳಾ ಅಭ್ಯರ್ಥಿಗಳು ವಯೋಮಿತಿ 18-30 ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ರವರನ್ನು ದೂರವಾಣಿ ಸಂಖ್ಯೆ :- 08172-296374, 9743144950, ಹಾಗೂ 8722606874 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

× How can I help you?