ಹಾಸನ:ನಗರದ ಸರ್ಕಾರಿ ಕಲಾ,ವಾಣಿಜ್ಯ ಮತ್ತು ಸಾತಕೋತ್ತರ ಕಾಲೇಜು ಸ್ವಾಯತ್ತ, ಹಾಸನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರಮೀಳಾ ಅವರು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟಿನಿಂದ ಕುಲಪತಿಗಳಿಗೆ ದತ್ತವಾದ ಅಧಿಕಾರಕ್ಕನುಗುಣವಾಗಿ ಮತ್ತು ಪರೀಕ್ಷಾ ಮಂಡಳಿಯ ಶಿಫಾರಸ್ಸಿನ ಮೇರೆಗೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ.
ಇವರು ಹೇಮ ಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ, ಹಾಸನ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಎಂ. ಶಂಕರ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾದರ ಪಡಿಸಿದ “ಮಂಕುತಿಮ್ಮನ ಕಗ್ಗ ಪರಂಪರೆಯ ಕೃತಿಗಳು: ತೌಲನಿಕ ಅಧ್ಯಯನ” ಎಂಬ ಮಹಾ ಪ್ರಬಂಧವನ್ನು ಕನ್ನಡ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಅಂಗೀಕರಿಸಲಾಗಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಾರಹಳ್ಳಿ ಗ್ರಾಮದ ನಿವೃತ್ತ ಪ್ರಥಮ ದರ್ಜೆ ಸಹಾಯಕರಾದ ಕೆಂಪಣ್ಣಗೌಡ ಕೆ.ಕೆ. ಮತ್ತು ಶ್ರೀಮತಿ ಜಯಮ್ಮ ಅವರ ಪುತ್ರಿ. ಹಾಸನ ನಗರದ ವಿಭಜಿತ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀಯುತ ಕೆ.ಸಿ. ಚಂದ್ರಮೌಳಿಯವರ ಧರ್ಮಪತ್ನಿಯಾಗಿದ್ದಾರೆ.