ಹಾಸನ – ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪ್ರೇಮಿಗಳು ಹಾಗೂ ಜನಪರ ಹೋರಾಟ ವೇದಿಕೆಯ ವತಿಯಿಂದ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ “ಅಧಿಕಾರದಿಂದ ಇಳಿಸಿ, ಕನ್ನಡ ಸಾಹಿತ್ಯ ಪರಿಷತ್ ಉಳಿಸಿ” ಎಂಬ ಘೋಷಣೆಯೊಂದಿಗೆ ಮೌನ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಹಾಸನದ ಹೇಮಾವತಿ ಪ್ರತಿಮೆಯಿಂದ ಆರಂಭವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಾಗಿತು. ನಂತರ ಸರ್ಕಾರದ ಗಮನ ಸೆಳೆಯುವಂತೆ ಮನವಿ ಪತ್ರವನ್ನೂ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೇಲೂರು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಕ್ರಿಯ ಸದಸ್ಯರಾದ ವೈ. ಎಸ್. ಸಿದ್ದೇಗೌಡ, ಟಿ.ಡಿ. ತಮ್ಮಣ್ಣ ಗೌಡ್ರು, ಧನಂಜಯ, ಬಿ.ಎಲ್. ಮೋಹನ್ ಮತ್ತು ಇತರರು ಭಾಗವಹಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಉಳಿವಿಗಾಗಿ ಹೋರಾಟದ ಪ್ರಾರಂಭಿಕ ಹೆಜ್ಜೆಯನ್ನು ಇಟ್ಟಿದ್ದಾರೆ.
ಮುಂದಿನ ಹೋರಾಟ
ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಹಂತದ ಬೃಹತ್ ಮಟ್ಟದ ಹೋರಾಟಕ್ಕೆ ರೂಪುರೇಷೆ ಹಾಕಲಾಗಿದ್ದು, ಹಾಸನದ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಷತ್ತಿನ ಘನತೆ ಉಳಿಸಲು ಕೋರಲಾಗಿದೆ.

ಜವಾಬ್ದಾರಿ ನೀವೇ now!
ಈ ಹೋರಾಟದ ವೇಳೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಜಯರಾಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಹೋರಾಟಕ್ಕೆ ನಾಯಕತ್ವ ವಹಿಸಿದರು. ಹೋರಾಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.
– ನೂರ್ ಅಹಮದ್