ಹಾಸನ:ದೇಶದ ಶೈಕ್ಷಣಿಕ ವ್ಯವಸ್ಥೆಗೆ ಇಂದು ಅಭಿವಿನ್ಯಾಸ ಬೇಕಿದೆ-ಡಾ. ಡಿ.ಜಿ. ಕೃಷ್ಣೇಗೌಡ ಅಭಿಪ್ರಾಯ

ಹಾಸನ:ದೇಶದ ಶೈಕ್ಷಣಿಕ ವ್ಯವಸ್ಥೆಗೆ ಇಂದು ಅಭಿವಿನ್ಯಾಸ ಬೇಕಿದೆ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ. ಡಿ.ಜಿ. ಕೃಷ್ಣೇಗೌಡ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು-ಸ್ವಾಯತ್ತ ಕಾಲೇಜಿನ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬವಣೆಯನ್ನು
ನಿವಾರಿಸಿಕೊಳ್ಳುವ ಸಾಮರ್ಥ್ಯ ಶಿಕ್ಷಣಕ್ಕೆ ಬೇಕಿದೆ. ಇಂದಿನ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಆದರೆ ರಾಷ್ಟ್ರ ಮಟ್ಟದ ಪರೀಕ್ಷೆಗಳನ್ನು ಎದುರಿಸುವಲ್ಲಿ ಅವರು ಹಿಂದೆ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಪದವಿ ಪಡೆಯುತ್ತಿದ್ದಾರೆ ಆದರೆ ನೈಪುಣ್ಯತೆ ಇಲ್ಲ ಎಂದು ವಿಷಾದ
ವ್ಯಕ್ತಪಡಿಸಿದರಲ್ಲದೆ, ಪಠ್ಯಕ್ರಮದ ಕುರಿತು ಚರ್ಚೆಗಳಾಗಬೇಕು ಆಗ ಮಾತ್ರ ಪಕ್ವತೆ ಬರಲು ಸಾಧ್ಯ ಎಂದರು.

ಹೊಸ ಶಿಕ್ಷಣ ನೀತಿಯಲ್ಲಿಯೂ ನ್ಯೂನ್ಯತೆಗಳಿದ್ದವು. ಹೊರದೇಶಗಳ ಶಿಕ್ಷಣ ವ್ಯವಸ್ಥೆಯಲ್ಲಿಯೂ ಲೋಪವಿತ್ತು. ವ್ಯಕ್ತಿತ್ವಕ್ಕೆ ಹೊಂದಿಕೊಳ್ಳುವoತಹ ತರಬೇತಿ ಪಡೆದುಕೊಳ್ಳಬೇಕು. ಸಂತೋಷದಿoದ ಜೀವನ ನಡೆಸುವ ಗುರಿ ಹೊಂದಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಶೈಕ್ಷಣಿಕ ಡೀನ್ ಪ್ರೊ. ರಾಜು ಡಿ.ಎಸ್. ಮಾತನಾಡಿ,ಕಾಲೇಜು ಪ್ರಾರಂಭವಾದoದಿನಿoದ ಇಂದಿನವರೆಗೆ 78 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಅಂದಿನಿoದ ಇಂದಿನವರೆಗೆ ಉತ್ತಮ ಪ್ರಾಂಶುಪಾಲರಿoದ ಶಿಕ್ಷಕವರ್ಗದವರನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಾಲೇಜು ಹೊಂದಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಅಭಿವಿನ್ಯಾಸ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿರುವ ವ್ಯವಸ್ಥೆಯನ್ನು ತಿಳಿಸಲು ಅನುಕೂಲವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎಂ.ಬಿ. ಇರ್ಷಾದ್,ಕಾಲೇಜಿಗೆ ಡಿ.ಜಿ. ಕೃಷ್ಣೇಗೌಡರ ಕೊಡುಗೆ ಅಪಾರವಾಗಿದೆ. ಶೈಕ್ಷಣಿಕ ಗುಣಮಟ್ಟದ ಅರಿವು ಮೂಡಿಸಲು ಶಿಕ್ಷಣ ತಜ್ಞರ ಪಾತ್ರ ಹೆಚ್ಚಿದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಮಟ್ಟದಲ್ಲಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಭಾಗಗಳು ಮತ್ತು ಸಮಿತಿಗಳ ಕಿರುಪರಿಚಯವನ್ನು ಮಾಡಲಾಯಿತು.ಕಾರ್ಯಕ್ರಮದಲ್ಲಿ ಪರೀಕ್ಷಾ ನಿಯಂತ್ರಕರಾದ ಡಾ. ಕೆ.ಡಿ. ಮುರು ಳೀಧರ್,ಪತ್ರಾಂಕಿತ ವ್ಯವಸ್ಥಾಪಕರಾದ ಸತ್ಯಮೂರ್ತಿ ಕೆ.ಟಿ., ಎಲ್ಲಾ ವಿಭಾಗದ
ಮುಖ್ಯಸ್ಥರು ಹಾಗೂ ಉಪನ್ಯಾಸಕರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ದೇವರಾಜು ಎಲ್ಲರನ್ನು ಸ್ವಾಗತಿಸಿದರು.

ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಶಾಂತ ಪಿ.ಆರ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಮನನ ಪ್ರಾರ್ಥನೆ ಮಾಡಿದರು.

Leave a Reply

Your email address will not be published. Required fields are marked *

× How can I help you?