ಎಚ್ ಡಿ ಕೋಟೆ : ರಾಜ್ಯದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ( H5N1) ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಮತ್ತು ಕೇರಳ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್ ಮತ್ತು ಪಶು ಸಂಗೋಪನಾ ಸಹಾಯಕ ನಿರ್ದೇಶಕರಾದ ಡಾ” ಪ್ರಸನ್ನ ಭೇಟಿ ನೀಡಿ ತಪಾಸಣೆ ನಡೆಸಿ ಪರಿಶೀಲಿಸಿದ್ದರು,
ನಂತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್ ರವರು ಮಾತನಾಡಿ ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ವೈರಸ್ ನಿಂದ ಹರಡುವ ರೋಗ ಇದು. ಟರ್ಕಿ ಕೋಳಿ ,ಗಿನಿ ಕೋಳಿ, ಬಾತುಕೋಳಿ ,ಗೀಜಗ ,ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಕಾಯಿಲೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು ಸಾಮಾನ್ಯವಾಗಿ ಹಕ್ಕಿಗಳಿಂದ ಹಾಡುತ್ತದೆ ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
ರೋಗಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಇಕ್ಕೆಗಳು ಮನುಷ್ಯರು ಕುಡಿಯುವ ನೀರಿನಲ್ಲಿ ಬೆರೆತು ಕಲುಷಿತ ಗೊಂಡಾಗ ಈ ಕಾಯಿಲೆ ಹರಡುತ್ತದೆ ಎಂದು ತಿಳಿಸಿದರು.

ನಂತರ ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ”ಪ್ರಸನ್ನ ಮಾತನಾಡಿ ನಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣ ಗಳು ಕಂಡು ಬಂದಿರುವುದಿಲ್ಲ, ಮುನ್ನೆಚ್ಚರಿಕೆ ಕ್ರಮವಾಗಿ ನಾವು ಎಲ್ಲಾ ಕೋಳಿ ಫಾರಂ ಗಳಿಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡಿದ್ದೇವೆ, ಬಾವಲಿ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಿ ವಾಹನಗಳ ತಪಾಸಣೆ ಮಾಡಿ ಸ್ಪ್ರೇಯಿಂಗ್ ಮಾಡುತ್ತಿದ್ದೇವೆ . ಯಾವುದೇ ಕೋಳಿ ಪಕ್ಷಿಗಳು ಸತ್ತಿರುವುದು ಕಂಡು ಬಂದರೆ ತಕ್ಷಣ ಸ್ಥಳೀಯ ಪಶು ಸಂಗೋಪನ ಇಲಾಖೆಗೆ ತಿಳಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಪಶುಸಂಗೋಪನೆ ಇಲಾಖೆಯ ಸಿಬ್ಬಂದಿ ವರ್ಗದವರಾದ ರವಿ ಅರಣ್ಯ ಇಲಾಖೆ, ಸಿಬ್ಬಂದಿ ವರ್ಗದವರು ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
- ಶಿವು, ಕೋಟೆ