ಎಚ್.ಡಿ.ಕೋಟೆ-ನರೇಗಾ ಯೋಜನೆ ಅನುಷ್ಠಾನ-ಎಚ್.ಡಿ.ಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ

ಎಚ್.ಡಿ.ಕೋಟೆ: ನರೇಗಾ ದಿನಾಚರಣೆ ಅಂಗವಾಗಿ 2023-24 ನೇ ಸಾಲಿನಲ್ಲಿ ನರೇಗಾ ಯೋಜನೆ ಅತ್ಯುತ್ತಮ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಮೈಸೂರು ವತಿಯಿಂದ ನೀಡುವ ಪ್ರಶಸ್ತಿ ಪುರಸ್ಕಾರದಲ್ಲಿ ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ 4.08.890 ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.

ಮೈಸೂರು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ನರೇಗಾ ದಿನಾಚರಣೆ-2024-25ರ ಕಾರ್ಯಕ್ರಮದಲ್ಲಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ ಅವರು, ಎಚ್.ಡಿ.ಕೋಟೆ ಕಾರ್ಯನಿರ್ವಾಹ ಅಧಿಕಾರಿ ಧರಣೇಶ್ ಅವರಿಗೆ ಪದಕ ಹಾಗೂ ಪ್ರಶಂಸನೀಯ ಪತ್ರ ನೀಡಿದ್ದಾರೆ.

ಎಚ್.ಡಿ.ಕೋಟೆ ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಪೈಕಿ‌ ಚಿಕ್ಕೋಡನಹಳ್ಳಿ ಗ್ರಾಮ ಪಂಚಾಯಿತಿ 41.119 ಮಾನವ ದಿನಗಳನ್ನು ಸೃಜನೆ ಮಾಡಿ ಹೆಸರು ಮಾಡಿದೆ. ತಾಲ್ಲೂಕು ಮಟ್ಟದ ಅನುಷ್ಠಾನ ಇಲಾಖೆಗಳಲ್ಲಿ ಎಚ್.ಡಿ ಕೋಟೆ ಸಾಮಾಜಿಕ ಅರಣ್ಯ ಇಲಾಖೆಯು 64.825 ಮಾನವ ದಿನಗಳನ್ನು ಸೃಜನೆ ಮಾಡಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲನಹಳ್ಳಿ ಗ್ರಾಮದ ಶಿವರಾಜು ಕೋಂ ರಾಜಪ್ಪ ಅವರಿಗೆ (ರೇಷ್ಮೆ ಇಲಾಖೆ ) ವೈಯುಕ್ತಿಕ ಫಲಾನುಭವಿ ಪ್ರಶಸ್ತಿ ದೊರೆತಿದೆ.ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಪ್ರಶಸ್ತಿ ಪ್ರೇರಣೆಯಾಗಿದೆ ಎಂದು ಪ್ರಶಸ್ತಿ ಸ್ವೀಕೃತರು ಕಾಯಕಯೋಗಿ ಪತ್ರಿಕೆಯೊಂದಿಗೆ ಮಾಹಿತಿ‌ ಹಂಚಿಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಡಾ.ಎಂ ಕೃಷ್ಣರಾಜು, ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಅನುಷ್ಠಾನ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದಾರೆ.

  • ಶಿವಕುಮಾರ ಕೋಟೆ

Leave a Reply

Your email address will not be published. Required fields are marked *

× How can I help you?