ಹೊಳೆನರಸೀಪುರ:ಸರ್ಕಾರಿ ನೌಕರರ ಸಂಘದ ಚುನಾವಣೆ- 21ಅಭ್ಯರ್ಥಿಗಳು ಅವಿರೋಧ ಆಯ್ಕೆ-11ಸ್ಥಾನಗಳಿಗಷ್ಟೇ ನಡೆಯಲಿರುವ ಚುನಾವಣೆ

ಹೊಳೆನರಸೀಪುರ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಗೆ 21 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಾಲ್ಲೂಕು ಚುನಾವಣಾಧಿಕಾರಿ ಸಪ್ನಾ ತಿಳಿಸಿದ್ದಾರೆ.

33 ನಿರ್ದೇಶಕರ ಸ್ಥಾನಗಳಲ್ಲಿ ಉಳಿದ 11 ಸ್ಥಾನಗಳಿಗಾಗಿ ಅಕ್ಟೋಬರ್ 28ರ ಸೋಮವಾರ ಬೆಳಗ್ಗೆ 9 ಗಂಟೆಯಿoದ ಸಂಜೆ 4ಗಂಟೆ ವರೆಗೆ ಚುನಾವಣೆ ನಡೆಯಲಿದೆ.

ತಾಲೂಕು ನಿರ್ದೇಶಕರ ಒಟ್ಟು 33 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು.ಮೀನುಗಾರಿಕೆ, ತೂಕ ಮತ್ತು ಆಳತೆ ಇಲಾಖೆಗೆ ಮೀಸಲಿದ್ದ ಒಂದು ಸ್ಥಾನಕ್ಕೆ ಒಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಉಳಿಕೆ11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅ. 21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಅ.28 ರ ಸಂಜೆ 4ಗಂಟೆಯವರೆಗೆ ಚುನಾವಣೆ ನಡೆಯಲಿದ್ದು, ನಂತರ ಮತ ಏಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

——————–ವಸಂತ್ ಕುಮಾರ್

Leave a Reply

Your email address will not be published. Required fields are marked *

× How can I help you?