ಹೊಳೆನರಸೀಪುರ- ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ರೌಢಶಾಲೆ ಮುಖ್ಯಶಿಕ್ಷಕರ ಸಭೆಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಎಸ್.ಎಸ್ ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಮಾರ್ಗದರ್ಶಿ ಉಜ್ವಲ ಕೈಪಿಡಿ ಬಿಡುಗಡೆ ಮಾಡಿದರು.
ಪುರಸಭಾಧ್ಯಕ್ಷ ಕೆ. ಶ್ರೀಧರ್, ಬಿ.ಇ.ಓ ಸೋಮಲಿಂಗೇಗೌಡ, ಪ್ರಾಂಶುಪಾಲ ದೇವರಾಜ್ ಭಾಗವಹಿಸಿದ್ದರು.
ಹೊಳೆನರಸೀಪುರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶಾಸಕ ಎಚ್.ಡಿ. ರೇವಣ್ಣ ಗುರುವಾರ ತಾಲ್ಲೂಕು ಪದವಿ ಕಾಲೇಜುಗಳ ಪ್ರಾಂಶುಪಾಲರ ಸಭೆಯನ್ನು ನಡೆಸಿದರು. ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಭಾಗವಹಿಸಿದ್ದರು.
——–—-ಸುಕುಮಾರ್