ಹುಣಸೂರು-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಡಿಯಲ್ಲಿ ದೊಡ್ಡ ಬೀಚನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಂಘಕ್ಕೆ 2ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲಾಗಿದೆ.
ಇಂದು ನಡೆದ ಸರಳ ಸಮಾರಂಭದಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಂದನಹಳ್ಳಿ ಸೋಮಶೇಖರ್, ಜಿಲ್ಲಾ ನಿರ್ದೇಶಕ ಮುರುಳಿದರ್,ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪ್ರಸನ್ನ ಬಿಳಿಕೆರೆ ಅನುದಾನ ಮಂಜೂರಾತಿ ಪತ್ರವನ್ನು ಸಂಘದ ಅಧ್ಯಕ್ಷೆ ಸವಿತಾರವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯಧರ್ಶಿ,ಸುಮಾ,ಬಸವಣ್ಣ , ಪ್ರೀತಿ ,ವೀಣಾ,ಶಿಲ್ಪಾ, ಸ್ವ ಸಹಾಯ ಸಂಘದ ಸದಸ್ಯರು, ಊರಿನ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.