ಮೂಡಿಗೆರೆ:ಸೆ.6ರಿಂದ 15ರವರೆಗೆ ಪಟ್ಟಣದ ಜೇಸಿ ಭವನದಲ್ಲಿ ಪ್ರೇರಣ ಜೇಸಿ ಸಪ್ತಾಹವನ್ನು ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ವಿವಿಧ ವೈವಿದ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಐ ಸಂಸ್ಥೆಯ
ಅಧ್ಯಕ್ಷ ಸುಪ್ರೀತ್ ಕಾರಬೈಲ್ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.6ರಂದು ಬೆಳಿಗ್ಗೆ 10.30ಕ್ಕೆ ಜೇಸಿ ಭವನದಲ್ಲಿ ಸಪ್ತಾಹದ ಉದ್ಘಾಟನೆಯನ್ನು ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ನೆರವೇರಿಸಲಿದ್ದಾರೆ. ನಂತರ ಹಿರಿಯ ಜೇಸಿ
ಸದಸ್ಯರಿಗೆ ಮತ್ತು ಹಿರಿಯ ನಾಗರಿಕರಿಗೆ ಗೌರವ ಸಮರ್ಪಣೆ ನೆರವೇರಿಲಿದೆ. ಸಂಜೆ ಲೇಡಿ ಜೇಸಿ ದಿನವನ್ನಾಗಿ ಆಚರಿಸಲಿದ್ದು ಶಾಸಕಿ ನಯನಾ ಮೋಟಮ್ಮ ಮುಖ್ಯ ಅತಿಥಿಯಾಗಿ ಭಾಗವಹಿಸಿಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಜೇಸಿ ಕುಟುಂಬ ಸದಸ್ಯರಿoದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಪತ್ರಿ ದಿನ ಸಂಜೆ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಸೆ.10 ರಂದು ಬೆಳಗ್ಗೆ 10.30ಕ್ಕೆ ಬೆಳಿಗ್ಗೆ ಜೇಸಿ ಭವನದಲ್ಲಿ ಸಾರ್ವಜನಿಕರಿಗೆ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು ಸಂಜೆ ಸಭಾ ಕಾರ್ಯಕ್ರಮದ ನಂತರ ಎಲ್ ಕೆ ಜಿ ಯಿಂದ 5 ನೇ ತರಗತಿಯವರೆಗಿನ
ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಸೆ.11ರಂದು ಬಿದರಹಳ್ಳಿ ಮೊರಾರ್ಜಿ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಗಿಡನೆಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ ಸಭಾ ಕಾರ್ಯಕ್ರಮದ ನಂತರ ಯುರೋ ಕಿಡ್ಸ್ ವುಡ್‌ಬ್ರಿಡ್ಜ್ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿರಲಿದೆ.
ಸೆ.12ರಂದು ಬೆಳಗ್ಗೆ ಜೇಸಿ ಭವನದಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ, ಸೆ.13ರಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿ ಹಾಗೂ ಸಾಧಕರಿಗೆ ಸನ್ಮಾನ, ಸೆ14ರಂದು ಬೆಳಿಗ್ಗೆ ಜೇಸಿ ಭವನದಲ್ಲಿ ಮಹಿಳಾ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ, ಸಂಜೆ ತಾಲೂಕು ಮಟ್ಟದ ಸಮೂಹ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ. ಸೆ.15ರಂದು ಸಂಜೆ 6ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಜೇಸಿ ಕಮಲಪತ್ರ ಪ್ರಧಾನ, ತಾಲೂಕಿನ ಸಾಧಕರಿಗೆ ಹಾಗೂ ಯುವ ಪ್ರತಿಭೆಗಳಿಗೆ ಸನ್ಮಾನ ಏರ್ಪಡಿಸಲಾಗಿದೆ. ಈ ಎಲ್ಲಾ ಸ್ಪರ್ಧೆಗಳಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಜೇಸಿ ಪೂರ್ವಾಧ್ಯಕ್ಷ ವಿಜಯಕುಮಾರ್, ಸಪ್ತಾಹದ ನಿರ್ದೇಶಕ ಸುದೀಪ್ ತ್ರಿಪುರ, ಉಪಾಧ್ಯಕ್ಷ ಪಿ.ವಿಶ್ವಕುಮಾರ್, ಪಿ.ಕೆ.ಹಮೀದ್ ಉಪಸ್ಥಿತರಿದ್ದರು.
——————–ವಿಜಯ್ ಕುಮಾರ್