ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ರೈತರಾದ ಗೀತಾ ಶ್ರೀನಿವಾಸ್(ಕುಂಟಣ್ಣನ ಶ್ರೀನಿವಾಸ್) ದಂಪತಿಗಳ ಸುಪುತ್ರಿ ಎ.ಎಸ್.ಲಕ್ಷ್ಮೀದೇವಿ(ದಿವ್ಯಶ್ರೀ) ಎಂಬ ವಿದ್ಯಾರ್ಥಿನಿ ಕೆ.ಆರ್.ಪೇಟೆ ಬಿಜಿಎಸ್ ಕಾಲೇಜಿನಲ್ಲಿ ಓದುತ್ತಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 534ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ ಹೊಂದುವ ಮೂಲಕ ಹುಟ್ಟೂರು ಅಗ್ರಹಾರಬಾಚಹಳ್ಳಿ ಗ್ರಾಮಕ್ಕೆ ಹಾಗೂ ಕೆ.ಆರ್.ಪೇಟೆ ತಾಲ್ಲೂಕಿಗೆ, ಪೋಷಕರಿಗೆ ಕೀರ್ತಿ ತಂದಿದ್ದಾಳೆ.

ಗ್ರಾಮೀಣ ವಿದ್ಯಾರ್ಥಿನಿ ದಿವ್ಯಶ್ರೀ(ಲಕ್ಷ್ಮೀದೇವಿ) ಅವರನ್ನು ಹೇಮಗಿರಿ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಪ್ರಸಾದೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎನ್.ತಿಮ್ಮೇಗೌಡ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮೀಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಮಂಡ್ಯ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಆರ್.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದ್ದಾರೆ.
– ಶ್ರೀನಿವಾಸ್ ಆರ್.