ಕೆ.ಆರ್.ಪೇಟೆ- ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 11 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬರೋಬ್ಬರಿ 8ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಬಿ.ಸಿ.ರಮೇಶ್, ಕಬ್ಬಲಗೆರೆ ಪುಟ್ಟಸ್ವಾಮೀಗೌಡ, ಎಂ.ಎಸ್.ಜಯರಾಮೇಗೌಡ, ಎಸ್.ಯೋಗ, ಬಿ.ವಿ.ಲಕ್ಷ್ಮೀನಾರಾಯಣ್, ಪವಿತ್ರಯಾಲಕ್ಕೀಗೌಡ, ನಾಗರಾಜು, ದೊಡ್ಡಗಾಡಿಗನಹಳ್ಳಿ ಕುಮಾರ್ ಭರ್ಜರಿ ಜಯ ಸಾಧಿಸಿದ್ದಾರ
ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಬಿ.ಎಸ್.ಅರುಣ್ ಕುಮಾರ್, ಕೆ.ಎಸ್.ಸತೀಶ್, ಲಲಿತಮ್ಮ ಗೆಲುವು ಸಾಧಿಸಿದ್ದಾರೆ.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಣಿಕೆ ಕೇಂದ್ರದ ಹೊರ ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ವಿಜಯೋತ್ಸವ ಆಚರಣೆ ಮಾಡಿದರು. ವಿಜೇತ ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದರು.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ, ಪುರಸಭಾ ಹಿರಿಯ ಸದಸ್ಯ ಕಾಂಗ್ರೆಸ್ ಮುಖಂಡ ಕೆ.ಬಿ.ಮಹೇಶ್, ಮನ್ಮುಲ್ ನಿರ್ದೇಶಕ ಡಾಲು ರವಿ, ಎಂ.ಬಿ.ಹರೀಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ಬಲ್ಲೇನಹಳ್ಳಿ ರಮೇಶ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ, ಹಿರಿಯ ಮುಖಂಡ ಪುಟ್ಟರಾಜು, ಯುವ ಮುಖಂಡ ಸಿವಿಲ್ ಇಂಜಿನಿಯರ್ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಆಡುನಿಂಗಣ್ಣನ ಬಿ.ಎಸ್.ರಾಮು, ಗ್ರಾ.ಪಂ.ಸದಸ್ಯ ರಂಗರಾಜು, ಕುಮಾರ್, ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.

ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲ್ಲೇನಹಳ್ಳಿ, ಬಿ.ಸಿ.ರಮೇಶ್ ಅವರು ನಮ್ಮ ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 11ಸ್ಥಾನಗಳ ಪೈಕಿ 8ಸ್ಥಾನಗಳನ್ನು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳನ್ನು ನೀಡಿ ಗೆಲ್ಲಿಸಿರುವ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮುಖಂಡರಿಗೆ ಹಾಗೂ ಶೇರುದಾರ ಮತದಾರ ಬಂಧುಗಳಿಗೆ ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಐದು ವರ್ಷಗಳ ಕಾಲ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಶೇರುದಾರರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿ ತಿಳಿಸಿದರು.
ಶ್ರೀನಿವಾಸ್ ಆರ್.