
ಕೆ.ಆರ್.ಪೇಟೆ- ತಾಲೂಕಿನ ಸಿಂದಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಹಾಗು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಕೆ ತಿಮ್ಮೇಗೌಡ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮತಿ ವಾಣಿರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು
ಮಕ್ಕಳನ್ನು ಉದ್ದೇಶಿ ಮಾತನಾಡಿದ ವೈ. ಕೆ ತಿಮ್ಮೆಗೌಡ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಮಕ್ಕಳ ಪ್ರತಿಭೆಗೆ ವೇದಿಕೆ ಒದಗಿಸುವುದರ ಜೊತೆಗೆ ವ್ಯಕ್ತಿತ್ವ ರೂಪಿಸುವುದಕ್ಕಾಗಿ ಸಹಕಾರಿಯಾಗಲಿದ್ದು ,ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಶಿಬಿರದಲ್ಲಿ ನಡೆಯುವ ಚಟುವಟಿಕೆಗಳು ಶೈಕ್ಷಣಿಕವಾಗಿ ಹೆಚ್ಚಿನ ಪ್ರಭಾವ ಬೀರಲಿದೆ ಎಂದು ತಿಳಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.

ಕಾರ್ಯನಿರ್ವಾಹಕ ಅಧಿಕಾರಿಯಾದ ಸುಷ್ಮಾ ಮಾತನಾಡಿ, ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ತಿಳಿಸಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾಗಬೇಕೆಂದು ಹಾರೈಸಿ ಮಕ್ಕಳಿಗೆ ಸಿಹಿ ಹಂಚಿದರು.
ಮಕ್ಕಳುಗಳನ್ನು ದೈಹಿಕವಾಗಿ, ಶೈಕ್ಷಣಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಈ ಶಿಭಿರವನ್ನು ಆಯೋಜಿಸಿದ್ದು,ಈ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ವಾಣಿ ಕೆ. ಜೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಕುಮಾರ್ ಮಾದಪ್ಪ,ಕಾರ್ಯದರ್ಶಿ ಹರೀಶ್ ಹೆಚ್ .ಎಂ, ಪುನರ್ವಸತಿ ಕಾರ್ಯಕರ್ತರಾದ ಶ್ರೀನಿವಾಸ್, ತಾಲೂಕು ಸಂಯೋಜಕರಾದ ವೆಂಕಟರಾಮ್, ಉಪನ್ಯಾಸಕರಾದ ರಾಮಚಂದ್ರು, ಪ್ರೌಢಶಾಲಾ ಶಿಕ್ಷಕರು ಗ್ರಾಮ ಪಂಚಾಯತಿ ಸದಸ್ಯರುಗಳಾದ ನಂಜಪ್ಪ, ಶಾಂಭವಿ, ರೂಪ, ಇಂಚನ, ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.