ಕೆ.ಆರ್.ಪೇಟೆ,ಮೇ.14: ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲಿಲ್ಲಿ ಎರಡು ಬೈಕುಗಳ ನಡುವೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ಬುಧವಾರ ಮಧ್ಯಾಹ್ನ ಸುಮಾರು 1ಗಂಟೆ ಸಮಯದಲ್ಲಿ ನಡೆದಿದೆ.
ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು ಸ್ಥಳದಲ್ಲಿಯೇ ಮೃಪಟ್ಟಿರುತ್ತಾರೆ. ಮತ್ತೊಂದು ಬೈಕಿನ ಸವಾರ ದೊಡ್ಡಯಾಚೇನಹಳ್ಳಿ ಗ್ರಾಮದ ಟೈಲರ್ ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಬಾಲಕೃಷ್ಣ ಅವರು ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಪುರಸಭಾ ಸದಸ್ಯ ಹೆಚ್.ಆರ್.ಲೋಕೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಶ್ರೀನಿವಾಸ್ ಆರ್.