ಕೆ.ಆರ್.ಪೇಟೆ:ಬೂಕನಕೆರೆ ಗ್ರಾಮದಲ್ಲಿ ವಿದ್ಯುತ್ ಅವಘಡಕ್ಕೆ ಬಲಿಯಾಗಿದ್ದ ನೇತ್ರಾವತಿ ಮೋಹನ್ ರವರ ಮನೆಗೆ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವುದರ ಜೊತೆಗೆ ಆರ್ಥಿಕ ಸಹಾಯವನ್ನು ಮಾಡಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು,ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಜನರು ಆಕಸ್ಮಿಕ ಅವಘಡಗಳಿಂದ ಮೃತಪಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ.ಹಾಗಾಗಿ ಪ್ರತಿಯೊಬ್ಬರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟು ತಮ್ಮ ಕಾಯಕವನ್ನು ಮಾಡಬೇಕು ಇಲ್ಲದಿದ್ದರೆ ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ಉದ್ಭವವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗಂಜಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಪರಮೇಶ್, ಕೃಷಿ ಪತ್ತಿನ ಸಹಕಾರ ಸಂಘದ ಸದ್ಯಸ ನಾಗೇಶ್, ಮುಖಂಡರಾದ ಮಂಜಣ್ಣ, ಲೋಕೇಶ್, ರಾಜಣ್ಣ, ಚಂನ್ನೇಗೌಡ, ಮಂಜುನಾಥ್, ಶಿವಣ್ಣ,ಕುಮಾರ್, ರಾಕೇಶ್, ರವಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
————————ಮನು ಮಾಕವಳ್ಳಿ ಕೆ ಆರ್ ಪೇಟೆ