ಕೆ.ಆರ್.ಪೇಟೆ-ಕೃಷ್ಣರಾಜಪೇಟೆ ತಾಲೂಕು ಗ್ರಾಜುಯೇಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಡಾ.ಅಂಚಿ ಸಣ್ಣಸ್ವಾಮಿಗೌಡ ಹಾಗೂ ಉಪಾಧ್ಯಕ್ಷರಾಗಿ ಡಿ.ಆರ್.ಮರಿಸ್ವಾಮಿಗೌಡ ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅಂಚಿಸಣ್ಣಸ್ವಾಮಿಗೌಡ ಹಾಗೂ ಮರಿಸ್ವಾಮಿಗೌಡ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಾದ ಕೆ.ಆರ್.ಪೇಟೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಭರತ್‌ಕುಮಾರ್ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.ಯೋಗೇಶ್ ಅವರು ಚುನಾವಣೆಗೆ ಸಹಾಯಕರಾಗಿ ಕಾರ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸಂಘದ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಷೇರುದಾರರು ಅಭಿನಂದಿಸಿದರು.
—–—-ಶ್ರೀನಿವಾಸ್ ಆರ್