ಕೆ.ಆರ್.ಪೇಟೆ:ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯ ವೈಪರೀತ್ಯ-ಮೂರು ತಿಂಗಳಿಗೊಮ್ಮೆ ಅರೋಗ್ಯ ತಪಾಸಣೆ ಅತ್ಯಗತ್ಯ -ಹಿರಿಯ ಗುಪ್ತಚರ ಸಹಾಯಕ ಸತೀಶ್ ಸಲಹೆ

ಕೆ.ಆರ್.ಪೇಟೆ:ಗ್ರಾಮೀಣ ಪ್ರದೇಶದ ಜನರು ಇಂದಿನ ಒತ್ತಡದ ಜೀವನದಲ್ಲಿ,ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಅನುಭವಿಸುತ್ತಿದ್ದಾರೆ.ಈ ಕಾರಣಕ್ಕೆ ಪ್ರತಿಯೊಬ್ಬರು ಎರಡು ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹಿರಿಯ ಗುಪ್ತಚರ ಸಹಾಯಕ ಸತೀಶ್ ಸಲಹೆ ನೀಡಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಮಡುವಿನಕೋಡಿ ಗ್ರಾಮದಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಿಕ್ಕೇರಿ ಯೋಜನೆ ಕಚೇರಿ ವತಿಯಿಂದ ಸರ್ಕಾರಿ ಆಸ್ಪತ್ರೆ ಹಾಗೂ ಮಾದೇಗೌಡ ಮೆಮೋರಿಯಲ್ ಆಸ್ಪತ್ರೆಯ ಸಹಾಯದೊಂದಿಗೆ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.ಪೂಜ್ಯರ ಮಾರ್ಗದರ್ಶನದಲ್ಲಿ ಸ್ವ ಸಹಾಯ ಸಂಘಗಳ ಮೂಲಕ ಹಲವಾರು ಮಂದಿ ಉತ್ತಮ ಬದುಕನ್ನು ಕಟ್ಟಿಕೊಂಡು ಆರ್ಥಿಕವಾಗಿ ಸದೃಢರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸದಸ್ಯರಿಗೆ ಆರ್ಥಿಕ ಸಹಕಾರ ನೀಡುವುದರ ಜೊತೆಗೆ ವ್ಯವಹಾರದ ಶಿಸ್ತು, ಸಂಸಾರ ನಿರ್ವಹಣೆ ಹಾಗೂ ಸಂಸ್ಕಾರಯುತ ಜೀವನ ಮೌಲ್ಯಗಳನ್ನು ಕಲಿಸಿಕೊಡುತ್ತಿದೆ.ಸಂಸ್ಥೆಯ ಹತ್ತು ಹಲವಾರು ಕಾರ್ಯಕ್ರಮಗಳು ಸಮಾಜದ ದುರ್ಬಲ ವರ್ಗದವರಿಗೆ ಆಶಾಕಿರಣವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹೆಚ್ಚಿನ ದಾಖಲೆಗಳ ಜಂಜಾಟವಿಲ್ಲ,ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಸಾಲ ಪಡೆಯಬಹುದಾಗಿದೆ.ಹೀಗಾಗಿ ಸಣ್ಣ-ಪುಟ್ಟ ವ್ಯಾಪಾರ ಆರಂಭಿಸಿ, ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಗೊಳಿಸಬೇಕೆಂಬ ಕನಸು ಕಾಣುವ ಬಡ ಮಹಿಳೆಯರಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಭರವಸೆ ಬೆಳಕಾಗಿದೆ.

ಕಣ್ಣಿನ ದೃಷ್ಟಿ ಎಲ್ಲರಿಗೂ ಮಹತ್ವದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ.ನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ನಾವು ಈ ಶಿಬಿರವನ್ನು ಆಯೋಜಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಿಕ್ಕೇರಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ವಿರೇಶಪ್ಪ,ಮೇಲ್ವಿಚಾರಕರಾದ ಗುಣಶ್ರೀ,ಮಾದೇಗೌಡ ಮೆಮೋರಿಯಲ್ ಆಸ್ಪತ್ರೆಯ ಮೂಳೆ ಮತ್ತು ಕಿಲು ತಜ್ಞ ವೈದ್ಯರಾದ ಡಾ. ಲೋಹಿತ್, ಡಾ.ಆಶಾಲತಾ, ಡಾ. ಶಶಿಕಾಂತ್, ಡಾ.ಹೇಮಲತಾ,ಮಡವಿನಕೊಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೀತಿ ಬೈರನಾಯಕ, ಉಪಾಧ್ಯಕ್ಷರಾದ ರತಿ ಮಹದೇವ್, ಸಮಾಜ ಸೇವಕರಾದ ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗಂಜಿಗೆರೆ ಮಹೇಶ್,ಸೇವಾ ಪ್ರತಿನಿಧಿಗಾಳದ ಶಶಿಕಲಾ, ನೇತ್ರಾವತಿ,ಪೂರ್ಣಿಮಾ,ಸುನೀತಾ ಶೋಭಾ ಗ್ರಾಮಸ್ಥರು ಸೇರಿದಂತೆ ಉಪಸ್ಥಿತರಿದ್ದರು.

—————————-ಮನು ಮಾಕವಳ್ಳಿ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?