ಕೆ.ಆರ್.ಪೇಟೆ : ತಾಲೂಕಿನ ಕಾಪನಹಳ್ಳಿ ಸಮೀಪದ ಶ್ರದ್ಧಾ ಭಕ್ತಿ ಕೇಂದ್ರವಾಗಿರುವ ಗವಿಮಠದ ಸ್ವತಂತ್ರ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಿನ್ನಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಚನ್ನವೀರ ಮಹಾಸ್ವಾಮಿಗಳು ಮಠದ ಆವರಣದಲ್ಲೆ ಬ್ರಹ್ಮ ರಥೋತ್ಸವದ ಕರ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಅವರು, ಇತಿಹಾಸದಿಂದಲೂ ಭಕ್ತಾದಿಗಳ ಇಷ್ಟಾರ್ಥ ಸಿದ್ದಿ ಕಲ್ಪಿಸಿ ಭಕ್ತರ ಮನಸ್ಸಿನಲ್ಲಿ ನೆಲೆಸಿರುವ ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 10 ರಿಂದ ಕಾಪನಹಳ್ಳಿ ಗವಿ ಮಠದ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು. ಫೆ 12ರಂದು ವಿಶೇಷ ಉತ್ಸವ,13ರಂದು ಸ್ವತಂತ್ರ ಶ್ರೀ ಸಿದ್ದಲಿಂಗೇಶ್ವರರ ಬ್ರಹ್ಮ ರಥೋತ್ಸವ ಹಾಗೂ 17ರ ಸೋಮವಾರ ರಾತ್ರಿ ತೆಪ್ಪೋತ್ಸವ ನಡೆಯಲಿದೆ.
ಆದ್ದರಿಂದ ಭಕ್ತಾಧಿಗಳು ಶರಣ ಶ್ರದ್ಧಾ ಕೇಂದ್ರವಾಗಿರುವ ಕಾಪನಹಳ್ಳಿ ಗವಿಮಠದಲ್ಲಿ ಎಂದಿನಂತೆ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮ ರಥೋತ್ಸವ ಕಾರ್ಯಗಳು ವೈಭವಯುತವಾಗಿ ಜರುಗಲಿದೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರ ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕು ಎಂದು ಗವಿಮಠದ ಪೀಠಾಧ್ಯಕ್ಷರಾದ ಶ್ರೀ.ಚನ್ನವೀರಯ್ಯ ಸ್ವಾಮೀಜಿ ಮನವಿ ಮಾಡಿದರು.
– ಮನು ಮಾಕವಳ್ಳಿ ಕೆ ಆರ್ ಪೇಟೆ