ಕೆ.ಆರ್.ಪೇಟೆ- ಮಾ.14-ರಂದು-ಫಸ್ಟ್-ಕ್ರೈ- ಇಂಟಲಿಟಾಟ್ಸ್-ಪೂರ್ವ-ಪ್ರಾಥಮಿಕ-ಶಾಲೆಯ- ಎರಡನೇ-ವರ್ಷದ-ವಾರ್ಷಿಕೋತ್ಸವ-ಸಮಾರಂಭ

ಕೆ.ಆರ್.ಪೇಟೆ– ಮಾರ್ಚ್ 14ರಂದು ಪಟ್ಟಣದ ಜಯನಗರ ಬಡಾವಣೆಯಲ್ಲಿ ಇರುವ ಇಂಟಲಿಟಾಟ್ಸ್ ಪೂರ್ವ ಪ್ರಾಥಮಿಕ ಶಾಲೆಯ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಸಂಸ್ಥಾಪಕ ಅಧ್ಯಕ್ಷ ಗೋಪಾಲಕೃಷ್ಣ ಆವದಾನಿಗಳು ತಿಳಿಸಿದರು.


ಪಟ್ಟಣದ ತಮ್ಮ ಶಾಲೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾ.14ರಂದು ಶುಕ್ರವಾರ ಬೆಳಿಗ್ಗೆ 10ಗಂಟೆಗೆ ವಾರ್ಷಿಕೋತ್ಸವ ಸಮಾರಂಭವನ್ನು ಚಿತ್ರನಟ ಹಾಗೂ ನಿರ್ದೇಶಕ ಎಸ್.ಎನ್.ಸೇತುರಾವ್ ಉದ್ಘಾಟನೆ ಮಾಡುವರು. ತಹಸೀಲ್ದಾರ್ ಎಸ್.ಯು.ಅಶೋಕ್, ಡಾ.ರಮಾ ಅಯ್ಯರ್ ಸೇರಿದಂತೆ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಾಗಾಗಿ ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.


ಗುಣ ಮಟ್ಟದ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಅರಿವು, ಗುರು ಹಿರಿಯರ ಬಗ್ಗೆ ಗೌರವ ಮೂಡಿಸಿ ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸುತ್ತಿರುವ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಫಸ್ಟ್ ಕ್ರೈ ಇಂಟಲಿಟಾಟ್ಸ್ ಶಾಲೆಯ ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಮಾರ್ಚ್ 14ರ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತಿಳಿಸಿದ ಸಂಸ್ಕೃತಿ ಸಂಘಟಕ ಶ್ರೀ ಗೋಪಾಲಕೃಷ್ಣ ಅವಧಾನಿಗಳು ತಿಳಿಸಿದರು.


ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಾಡಿನ ಖ್ಯಾತ ಕಲಾವಿದರು ಹಾಗೂ ಕಿರಿ ತೆರೆಯ ಹಿರಿಯ ನಟರಾದ ಸೇತುರಾಮ್, ಲೆಫ್ಟಿನೆಂಟ್ ಕರ್ನಲ್ ತಹಶೀಲ್ದಾರ್ ಎಸ್.ಯು.ಅಶೋಕ್ ಹಾಗೂ ನ್ಯಾಯವಾಧಿ ರಮಾ ಅಯ್ಯರ್ ಅವರಿಗೆ ದೇವದೂತ’ ಎಂಬ ಬಿರುದು ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ವಿವರಿಸಿದರು. ಪತ್ರಿಕಾ ಗೋಷ್ಟಿಯಲ್ಲಿ ಮುಖ್ಯ ಶಿಕ್ಷಕಿ ನಿವೇದಿತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?