ಕೆ.ಆರ್.ಪೇಟೆ-ಸರ್ಕಾರದ-ನಡೆ-ಕಾರ್ಯಕರ್ತರ-ನಡೆ-ಕಾರ್ಯಕ್ರಮ


ಕೆ.ಆರ್.ಪೇಟೆ: ಏಪ್ರಿಲ್ 06 ರ ಭಾನುವಾರ ಮಧ್ಯಾಹ್ನ 2ಗಂಟೆಗೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಜಯಮ್ಮ-ಶಿವಲಿಂಗೇಗೌಡ ಸಮುದಾಯ ಭವನದ ಆವರಣದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ “ಸರ್ಕಾರದ ನಡೆ ಕಾರ್ಯಕರ್ತರ ಕಡೆ ” ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದ ವಿವರಗಳನ್ನು ಪ್ರಕಟಿಸಿದರು.
ರಾಜ್ಯದ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಕಾಂಗ್ರೆಸ್ ಮುಖಂಡರು, ವಿವಿಧ ನಿಗಮ ಮಂಡಲಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

ಮುಖ್ಯಮAತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕತ್ವದ ಕಾಂಗ್ರೆಸ್ ಸರ್ಕಾರದ ಜನಪರ ಕೆಲಸಗಳನ್ನು ಕಾರ್ಯಕರ್ತರು ತಳಮಟ್ಟದಲ್ಲಿ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾರ್ಯಕರ್ತರ ಪರಿಶ್ರಮದಿಂದಲೇ ರಾಜ್ಯದಲ್ಲಿಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರ ಕುಂದು ಕೊರತೆಗಳನ್ನು ಸಭೆಯಲ್ಲಿ ಆಲಿಸಲಾಗುವುದಲ್ಲದೆ ತಾಲೂಕಿನ ಜ್ವಲಂತ ಸಮಸ್ಯೆಗಳು ಮತ್ತು ಆಗಬೇಕಾಗಿರುವ ಅಭಿವೃದ್ದಿ ಕೆಲಸಗಳ ಬಗ್ಗೆ ಚರ್ಚಿಸಲಾಗುವುದು.


ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಕರ್ತರು ಸರ್ಕಾರದ ಬಳಿಗೆ ಹೋಗುವ ಬದಲು ಸರ್ಕಾರವೇ “ಸರ್ಕಾರದ ನಡೆ ಕಾರ್ಯಕರ್ತರ ಕಡೆ ” ಕಾರ್ಯಕ್ರಮದ ಮೂಲಕ ಕಾರ್ಯಕರ್ತರ ಬಳಿಗೆ ಬರುತ್ತಿದೆ ಎಂದ ಬಿ.ನಾಗೇಂದ್ರ ಕುಮಾರ್ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕಾಂಗ್ರೆಸ್ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ತಾಲ್ಲೂಕು ಕಾಂಗ್ರೆಸ್ ಪ.ಜಾ. ವಿಭಾಗದ ಅಧ್ಯಕ್ಷ ರಾಜಯ್ಯ, ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಸಲ್ಲು, ಮುಖಂಡರಾದ ಮಡುವಿನಕೋಡಿ ಕಾಂತರಾಜು, ಅಕ್ಕಿಹೆಬ್ಬಾಳು ಅಣ್ಣಯ್ಯ, ಇಲಿಯಾಸ್ ಅಹಮದ್, ಜಮೀರ್, ಹಾಫಿಜುಲ್ಲಾ ಷರೀಪ್, ಪುರಸಭೆ ನಾಮಿಸಿ ಸದಸ್ಯ ಅಜ್ಮತ್ ಉಲ್ಲಾ ಷರೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

– ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *

× How can I help you?