ಕೆ.ಆರ್.ಪೇಟೆ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೆ.ಆರ್.ಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಉಳಿದಂತೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರುಗಳನ್ನಾಗಿ ವಳಗೆರೆ ಮೆಣಸ ಕುಮಾರ್, ಚಟ್ಟೇನಹಳ್ಳಿ ಉದೇಶ್, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್, ಗೋವಿಂದನಹಳ್ಳಿಕೊಪ್ಪಲು ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಅಗ್ರಹಾರ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಗೊರವಿ ಕುಮಾರ್, ಟೌನ್ ಕನಕದಾಸನಗರ ಶಿವಮ್ಮ, ಸಿಂಧುಘಟ್ಟ ಅಫೀಜ್ ಉಲ್ಲಾ, ಬೊಮ್ಮೇನಹಳ್ಳಿ ಲತಾ, ಬೂಕನಕೆರೆ ರೂಪಾ, ಯಗಚಗುಪ್ಪೆ ಶಿವಲಿಂಗಪ್ಪ, ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ ಅವರನ್ನು ನೇಮಕ ಮಾಡಿರುವುದಾಗಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೊರಡಿಸಿರುವ ತಮ್ಮ ಲಿಖಿತ ಆದೇಶದಲ್ಲಿ ತಿಳಿಸಿದ್ದಾರೆ.
ನೂತನ ಅಧ್ಯಕ್ಷರಾದ ಎ.ಬಿ.ಕುಮಾರ್ ಹಾಗೂ ಎಲ್ಲಾ ಸದಸ್ಯರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್,ಬಿ.ಪ್ರಕಾಶ್, ಕೆಯುಐಡಿಎಫ್ ಸಿ ನಿಗಮದ ಮಾಜಿ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಹರಳಹಳ್ಳಿ ವಿಶ್ವನಾಥ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು ಅಭಿನಂದಿಸಿದ್ದಾರೆ.
————-——-ಶ್ರೀನಿವಾಸ್ ಕೆ.ಆರ್ ಪೇಟೆ