ಕೆ.ಆರ್.ಪೇಟೆ-ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ರಾಮನಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂಜೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷ ಆರ್.ರುದ್ರೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನ ಬಯಸಿ ಮಂಜೇಗೌಡ ಅವರನ್ನು ಹೊರತುಪಡಿಸಿ ಬೇರೇ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವ ಕಾರಣ ನೂತನ ಅಧ್ಯಕ್ಷರಾಗಿ ಮಂಜೇಗೌಡ ಅವರ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಪಾಂಡವಪುರ ಸಹಕಾರ ಅಭಿವೃದ್ಧಿ ಇಲಾಖೆಯ ಅಧಿಕಾರಿ ಹೇಮಾವತಿ ,ಸಹ ಚುನಾವಣಾಧಿಕಾರಿಯಾಗಿ ಸಂಘದ ಕಾರ್ಯದರ್ಶಿ ಆರ್.ಸಿ.ಯೋಗೇಶ್ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷರಾದ ಮಂಜೇಗೌಡ ಅವರನ್ನು ಸಂಘದ ಉಪಾಧ್ಯಕ್ಷೆ ಶಶಿಕಲಾಸುರೇಶ್, ನಿರ್ದೇಶಕರಾದ ದಯಾನಂದ್, ಆರ್.ಸಿ.ಮಂಜೇಗೌಡ, ನಾಗರಾಜು, ಕುಮಾರ್, ಸರಸ್ವತಿ, ಲೀಲಾವತಿ, ಮಂಜೇಗೌಡ.ಆರ್. ಸಂಘದ ಸಿಇಓ ಲೋಕೇಶ್, ಹಾಲು ಪರೀಕ್ಷಕ ಪ್ರದೀಪ್ ಸೇರಿದಂತೆ ಗ್ರಾಮದ ಮುಖಂಡರು, ಸಂಘದ ಶೇರುದಾರರು ಅಭಿನಂದಿಸಿದ್ದಾರೆ.
ಸಂಘದ ಎಲ್ಲಾ ನಿರ್ದೇಶಕರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಸಂಘದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಂಘಕ್ಕೆ ಹಾಲು ಪೂರೈಕೆ ಮಾಡುವ ಉತ್ಪಾದಕರು ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು.
———--ನೂತನ ಅಧ್ಯಕ್ಷ ಮಂಜೇಗೌಡ
——————ಶ್ರೀನಿವಾಸ್ ಕೆ ಆರ್ ಪೇಟೆ