ಕೆ.ಆರ್.ಪೇಟೆ-ಹೆಚ್.ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಜೆ.ಡಿ.ಎಸ್-ಮತ್ತೊಮ್ಮೆ ಸಿ.ಎಂ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ

ಕೆ.ಆರ್.ಪೇಟೆ-ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಂ, ಶಾಸಕರ ಸಹೋದರ ಹೆಚ್.ಟಿ.ಲೋಕೇಶ್ ಮತ್ತು ಮುಖಂಡರು ಹಾಗೂ ಜೆಡಿಎಸ್ ಕಾರ್ಯಕರ್ತರು ಕೆ.ಆರ್ ಪೇಟೆ ಪಟ್ಟಣದಲ್ಲಿರುವ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ತಾಲೂಕು ಸರ್ಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಿದರು.

ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿದ ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕಿರಾಮ್,ರಾಜ್ಯ ಕಂಡ ರೈತರ ಪರ ಅಪರೂಪದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಹುಟ್ಟು ಹಬ್ಬವನ್ನು ಅಧಿವೇಶನದಲ್ಲಿ ಭಾಗವಹಿಸಿರುವ ಶಾಸಕರಾದ ಹೆಚ್.ಟಿ.ಮಂಜು ಅವರ ಮಾರ್ಗದರ್ಶನದಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆ ಹೊರ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಕುಮಾರಸ್ವಾಮಿ ಅವರಿಗೆ ಇನ್ನೂ ಹೆಚ್ಚಿನ ಅಧಿಕಾರ ಮತ್ತು ಆರೋಗ್ಯ ನೀಡಲಿ ಎಂದು ಹಾರೈಸಿ ಪಟ್ಟಣದ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಕುಮಾರಸ್ವಾಮಿಯವರ ಅಧಿಕಾರದ ಅವಧಿಯು ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಅತ್ಯುತ್ತಮ ಆಡಳಿತವಾಗಿದೆ. ರೈತರು,ಕಾರ್ಮಿಕರು,ಸೇರಿದಂತೆ ದುಡಿಯುವ ಶ್ರಮಿಕ ವರ್ಗದ ಪರವಾಗಿ ನಿಲ್ಲುವ ಮೂಲಕ ಎಲ್ಲಾ ವರ್ಗದ ಜನತೆಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಪರಿಕಲ್ಪನೇ ಹಾಗೂ ರಾಜ್ಯದ ರೈತರ ದೀನ ದಲಿತರ ಬಗ್ಗೆ ಸದಾ ಚಿಂತಿಸುತ್ತಿರುವ ಏಕೈಕ ಅಪರೂಪದ ರಾಜಕಾರಣಿ ಎಂದರೆ ಹೆಚ್.ಡಿ.ಕುಮಾರಸ್ವಾಮಿಯವರು ಎಂದರು.

ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಹೆಚ್.ಟಿ.ಲೋಕೇಶ್ ಮಾತನಾಡಿ, ರಾಜ್ಯ ರೈತರ ಅಭಿವೃದ್ಧಿಗೆ ದುಡಿಯುತ್ತಿರುವ ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಿಸುವುದು ನಮ್ಮೆಲ್ಲರ ಕರ್ತವ್ಯ.ಕುಮಾರಸ್ವಾಮಿ ಯವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನೋಡಲು ರಾಜ್ಯದ ಜನತೆ ಕಾತುರರಾಗಿದ್ದಾರೆ. ದೇವರು ಈ ಅವಕಾಶವನ್ನು ಕಲ್ಪಿಸಿಕೊಡಲಿ ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ತಾ.ಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ತಾಲ್ಲೂಕು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ವಿ.ಎಸ್.ಧನಂಜಯ್‌ ಕುಮಾರ್, ಬೋರ್‌ವೆಲ್ ಮಹೇಶ್, ರಾಜ್ಯ ಸಹಕಾರ ಮರಾಟ ಮಹಾಮಂಡಲದ ನಿರ್ದೇಶಕ ಎಸ್.ಎಲ್.ಮೋಹನ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಬಿ.ವಿ.ನಾಗೇಶ್, ಮಾಕವಳ್ಳಿ ವಸಂತಕುಮಾರ್, ಸಂತೆಬಾಚಹಳ್ಳಿ ರವಿಕುಮಾರ್, ಚೌಡೇನಹಳ್ಳಿ ನಾಗರಾಜು, ಅಕ್ಕಿಹೆಬ್ಬಾಳು ಬಸವಲಿಂಗಪ್ಪ, ಹೇಮಂತ್‌ಕುಮಾರ್, ಗಿರೀಶ್, ಅತೀಕ್ ಅಹಮದ್, ಹರಿಹರಪುರ ನರಸಿಂಹ, ಮುಖಂಡರಾದ ಕತ್ತರಘಟ್ಟ ಪರಮೇಶ್, ಐಕನಹಳ್ಳಿ ದೇವೇಗೌಡ, ಬೇಲದಕೆರೆ ಮರೀಗೌಡ, ಕೃಷ್ಣೇಗೌಡ, ಆಲಂಬಾಡಿಕಾವಲು ಮೋಹನ್, ಅಲೋಕ್, ತಾಲ್ಲೂಕು ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಯಗಚಗುಪ್ಪೆ ಲೋಕೇಶ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ಮಾಕವಳ್ಳಿ ಕುಮಾರಸ್ವಾಮಿ, ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

————————––ಶ್ರೀನಿವಾಸ್ ಆರ್.

Leave a Reply

Your email address will not be published. Required fields are marked *

× How can I help you?