ಕೆ.ಆರ್.ಪೇಟೆ,ಮೇ.20: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆರೋಗ್ಯ ಮತ್ತು ಶಿಕ್ಷಣ ಅಗತ್ಯವಾಗಿದೆ. ಈ ಎರಡೂ ಕ್ಷೇತ್ರದಲ್ಲಿ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಬಳಗವು ಆಯೋಜಿಸಿದ್ದ ಬೃಹತ್ ಆರೋಗ್ಯ ಮೇಳ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯವೇ ಶ್ರೇಷ್ಠವಾದುದು. ಹಾಗಾಗಿ ಪ್ರತಿಯೊಬ್ಬರೂ ಕನಿಷ್ಠ 6ತಿಂಗಳಿಗೊಮ್ಮೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಸಮಾಜ ಸೇವಕ ಮಲ್ಲಿಕಾರ್ಜುನ್ ಅವರ ಅಭಿಮಾನಿಗಳ ಬಳಗವು ಹಮ್ಮಿಕೊಂಡಿರುವ ಉಚಿತ ಅರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯವಾದುದು ಎಂದು ಹೇಳಿದರು.

ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸಮಾಜಮುಖಿಯಾಗಿ ಆಲೋಚಿಸಿ ನೊಂದ ಜನರಿಗೆ ಕೈಲಾದ ಸಹಾಯ ಮಾಡುವ ಕಳಕಳಿಯನ್ನು ಹೊಂದಿರುವ ಮಲ್ಲಿಕಾರ್ಜುನ್ ಅವರಂತಹ ಸಮಾಜ ಸೇವಕರು ಇಂದಿನ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿದ್ದಾರೆ. ಆರ್.ಟಿ.ಓ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಅವರು ತಾವು ಕಷ್ಟಪಟ್ಟು ಗಳಿಸಿದ ಹಣದಲ್ಲಿ ಅಲ್ಪ ಭಾಗವನ್ನು ಆರೋಗ್ಯ ಸಂವರ್ಧನೆಗೆ ಹಾಗೂ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಳಸುವ ಮೂಲಕ ನಾಗರಿಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಅಭಿಮಾನದಿಂದ ಹೇಳಿ ಈ ಕೆಲಸವು ಅರ್ಧಕ್ಕೆ ನಿಲ್ಲದೆ ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಬೇಬಿ ಬೆಟ್ಟದ ಶ್ರೀ ಶಿವಬಸವ ಸ್ವಾಮೀಜಿ, ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶಿವಾನಂದ ಪುರಿ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ತೆಂಡೇಕೆರೆ ಬಾಳೆ ಹೊನ್ನೂರು ಶಾಖಾ ಮಠದ ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಗಂಜಿಗೆರೆ ನಟರಾಜ್, ಸಾರಿಗೆ ತೆರಿಗೆ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಿ.ಟಿ.ಮೂರ್ತಿ, ಮಾಜಿ ಶಾಸಕರಾದ ಕೆ. ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ವಿಜಯ್ ರಾಮೇಗೌಡ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಮನ್‌ಮುಲ್ ನಿರ್ದೇಶಕ ಡಾಲು ರವಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಸಮಾಜ ಸೇವಕ ಹೊಸಹೊಳಲು ನಂಜು0ಡಸ್ವಾಮಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಚಂದ್ರಶೇಖರ್ ಗುಳ್ಳೇದ್, ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಗಾಯತ್ರಿ, ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಬಿ. ನಂಜಪ್ಪ, ರಾಘವೇಂದ್ರರಾವ್, ಜಯರಾಮ ನೆಲ್ಲಿತ್ತಾಯ, ರಮೇಶ್, ಗಂಜಿಗೆರೆ ಮಹೇಶ್, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪವರ್ ಟೀವಿ ಸಂಪಾದಕ ರಾಕೇಶ್ ಶೆಟ್ಟಿ ಸ್ವಾಗತಿಸಿದರು, ಪುರಸಭೆ ಮಾಜಿ ಸದಸ್ಯ ಕೆ. ಆರ್. ನೀಲಕಂಠ ಕಾರ್ಯಕ್ರಮ ನಿರೂಪಿಸಿದರು, ಕಾಡುಮೆಣಸ ಚಂದ್ರು ವಂದಿಸಿದರು.
– ಶ್ರೀನಿವಾಸ್ ಆರ್.