ಕೆ.ಆರ್.ಪೇಟೆ-‘ಮಂಡ್ಯ-ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನ’-ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ

ಕೆ.ಆರ್.ಪೇಟೆ-ಮಂಡ್ಯ ನಗರದಲ್ಲಿ ಡಿ.20ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಿಂದ ಕನಿಷ್ಠ 20 ಸಾವಿರಕ್ಕೂ ಹೆಚ್ಚಿನ ಜನರು ಭಾಗವಹಿಸುವ ಮೂಲಕ ತಾಲೂಕಿನ ಕೀರ್ತಿಯನ್ನು ಎತ್ತಿ ಹಿಡಿಯಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಮನವಿ ಮಾಡಿದರು.

ಪಟ್ಟಣದ ಸಾಹುಕಾರ್ ಚಿಕ್ಕಣ್ಣಗೌಡ ಸಮುದಾಯ ಭವನದಲ್ಲಿ ತಾಲ್ಲೂಕು ಆಡಳಿತವು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಹಾಜರಿದ್ದ ತಾಲೂಕು ಮಟ್ಟದ ಅಧಿಕಾರಿಗಳು,ಆಶಾ,ಅಂಗನವಾಡಿ ಕಾರ್ಯಕರ್ತೆಯರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ಹಬ್ಬದ ಬಗ್ಗೆ ವೈಯುಕ್ತಿಕವಾಗಿಯೂ ವ್ಯಾಪಕ ಪ್ರಚಾರ ಮಾಡುವಂತೆ ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಮಾತನಾಡಿ, ಕನ್ನಡ ಸಾರಸ್ವತ ಲೋಕಕ್ಕೆ ಕೆ.ಆರ್.ಪೇಟೆ ತಾಲೂಕಿನ ಸಾಹಿತಿಗಳ ಕೊಡುಗೆಯು ದೊಡ್ಡದಿದೆ. ಕೃಷ್ಣರಾಜಪೇಟೆ ತಾಲೂಕಿನ ಜನರು ಹೃದಯ ವೈಶಾಲ್ಯತೆ ಹೊಂದಿರುವ ಜನರಾಗಿದ್ದು,ಸಮ್ಮೇಳನದಲ್ಲಿ ಸಾವಿರಾರು ಜನರು ಪ್ರತಿದಿನವೂ ಭಾಗವಹಿಸಿ ಕೆ. ಆರ್.ಪೇಟೆ ಎಂದರೆ ಮಂಡ್ಯ ಎಂಬ ಛಾಪನ್ನು ಮೂಡಿಸಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ, ದೇಶ ಮಾತ್ರವಲ್ಲದೆ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರೂ ಆಗಮಿಸಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಕನ್ನಡದ ಜಾತ್ರೆ, ಕನ್ನಡದ ನುಡಿ ಹಬ್ಬದಲ್ಲಿ ಭಾಗವಹಿಸಿ ಅಪರೂಪದ ಅವಕಾಶವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಹೇಳಿದರು.

ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್ ಅವರ ಅಂತರoಗದ ತಲ್ಲಣ ಪುಸ್ತಕ ಬಿಡುಗಡೆ.

ಇದೆ ಸಂದರ್ಭದಲ್ಲಿ ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್ ಬರೆದಿರುವ ವೈವಿದ್ಯಮಯ ಲೇಖನಗಳ ಸಂಗ್ರಹದ “ಅಂತರoಗದತಲ್ಲಣ“ ಎಂಬ ಕೃತಿಯನ್ನುಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ:ಮಹೇಶ್‌ಜೋಶಿ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಡಾ.ಪಟೇಲ್ ಪಾಂಡು, ತಹಸೀಲ್ದಾರ್ ಡಾ.ಅಶೋಕ್, ಅಂಚಿ ಸಣ್ಣಸ್ವಾಮೀಗೌಡ, ಪೂರ್ಣಚಂದ್ರತೇಜಸ್ವಿ, ಡಾ.ಕೆ.ಕಾಳೇಗೌಡ, ಕೆ.ಎಸ್. ಸೋಮಶೇಖರ್, ಕೆ.ಆರ್.ನೀಲಕಂಠ, ಬಳ್ಳೇಕೆರೆ ಮಂಜುನಾಥ್, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಕಟ್ಟೆಮಹೇಶ್, ಅಕ್ಕಿಹೆಬ್ಬಾಳು ವಾಸು, ಚಂದ್ರಕಲಾ ರಮೇಶ್, ಮರುವನಹಳ್ಳಿಶಂಕರ್, ಹೊನ್ನೇನಹಳ್ಳಿ ವೇಣು, ಸೋಮಶೇಖರ್, ಟಿಂಪೋ ಶ್ರೀನಿವಾಸ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

————-ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?