ಕೆ.ಆರ್ ಪೇಟೆ:ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-18 ರಂದು ಪೂರ್ವಭಾವಿ ಸಭೆ-ಪೂರ್ಣ ಚಂದ್ರ ತೇಜಸ್ವಿ ಮಾಹಿತಿ

ಕೆ ಆರ್ ಪೇಟೆ:ಮುಂಬರುವ ಡಿಸೆಂಬರ್ ತಿಂಗಳಲ್ಲಿ ದಿನಾಂಕ 20,21,22 ರಂದು ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ದತೆ ಕುರಿತು ಇದೇ ಶುಕ್ರವಾರ 18 ರಂದು 12:30ಕ್ಕೆ ಸಾಹುಕಾರ್ ಚಿಕ್ಕಣ್ಣಗೌಡ ಸಮುದಾಯದ ಭವನದಲ್ಲಿ ಪೂರ್ವ ಭಾವಿ ಸಭೆಯನ್ನು ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್ ಟಿ ಮಂಜು ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯಾದ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಷಿ ನೆರವೇರಿಸಲಿದ್ದಾರೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪೂರ್ಣ ಚಂದ್ರ ತೇಜಸ್ವಿ ಮಾಹಿತಿ ನೀಡಿದರು.

ಅವರು ಪಟ್ಟಣದಲ್ಲಿರುವ ‌ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾಶಿವಲಿಂಗಯ್ಯ ಉಪಸ್ಥಿತಿರಿರುತ್ತಾರೆ.ಆದ್ದರಿಂದ ತಾಲ್ಲೂಕಿನ ಕನ್ನಡದ ಅಭಿಮಾನಿಗಳು, ಕನ್ನಡದ ಮನಸುಗಳು,ವಿವಿಧ ಕನ್ನಡ ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಮುಖ್ಯಸ್ಥರು ಸಕಾಲಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿಕೊಂಡರು.

ಸುಮಾರು 30ವರ್ಷಗಳ ನಂತರ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ವಿಚಾರವಾಗಿದೆ.ಬೇರೆ ಬೇರೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ.ನಮ್ಮ ಜಿಲ್ಲೆಯಿಂದ ಅತ್ಯಂತ ಬೃಹತ್ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್, ಕಾರ್ಯದರ್ಶಿ ಕಟ್ಟೆ ಮಹೇಶ್, ಕೋಶಾಧ್ಯಕ್ಷರಾದ ಮಂಜೇಗೌಡ, ಕಸಾಪ ಕಸಬಾ ಹೋಬಳಿ ಘಟಕ ಅಧ್ಯಕ್ಷ ಸಿ ವಿ ಧರ್ಮರಾಜ್ , ಬೂಕನಕೆರೆ ಹೋಬಳಿ ಘಟಕ ಅಧ್ಯಕ್ಷ ಕಟ್ಟಹಳ್ಳಿ ಪಾಪಣ್ಣ, ಶೀಳನೆರೆ ಹೋಬಳಿ ಘಟಕ ಅಧ್ಯಕ್ಷ ಆರ್ ಕೆ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

——————--ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?