ಕೆ.ಆರ್.ಪೇಟೆ-ಫೆ.12 ರಂದು ದಿ.ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ-ಗೂಡೆಹೊಸಳ್ಳಿ ಜವರಾಯಿಗೌಡ ಮಾಹಿತಿ

ಕೆ.ಆರ್.ಪೇಟೆ-ಮಾಜಿ ಸ್ಪೀಕರ್ ದಿ.ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನ ವತಿಯಿಂದ ಆಯೋಜಿಸಿರುವ ಪ್ರಸ್ತುತ ಕೃಷಿ ಬಿಕ್ಕಟ್ಟುಗಳು ಹಾಗೂ ಪರಿಹಾರಗಳು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಇದೇ ಫೆ.12 ರಂದು ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ಸುಲೋಚನಮ್ಮ-ರಾಮದಾಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಟಾನ ಅಧ್ಯಕ್ಷರಾದ ಗೂಡೆಹೊಸಳ್ಳಿ ಜವರಾಯಿಗೌಡ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅವರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಕೆಂಗೇರಿ ಬೆಂಗಳೂರು ಪೀಠಾಧಿಪತಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರು ವಹಿಸುವರು,ಕೃಷ್ಣ ಪ್ರತಿಷ್ಠಾನದ ಗೌರವಾಧ್ಯಕ್ಷೆ ಪ್ರೊ.ಇಂದಿರಾ ಕೃಷ್ಣ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನರಾಗಿ ಭಾಗ ವಹಿಸುವರು.ಈ ವಿಚಾರ ಸಂಕೀರ್ಣದಲ್ಲಿ ನಿವೃತ್ತ ಪ್ರಾಂಶುಪಾಲರು ಹಾಗೂ ಸಹಜ ಕೃಷಿಕ ಬಾಳೆಕಾಯಿ ಶಿವನಂಜಯ್ಯ ಪ್ರಸ್ತುತ ಕೃಷಿ ಬಿಕ್ಕ ಟ್ಟುಗಳು ಹಾಗೂ ಪರಿಹಾರಗಳನ್ನು ಕುರಿತು ಉಪನ್ಯಾಸ ನೀಡುವರು.ಸಾವಯವ ಕೃಷಿಕರಾದ ಸಿ.ಪಿ. ಕೃಷ್ಣ ನೀರಾವತಿ ಪ್ರದೇಶದಲ್ಲಿ ಸಾವಯವ ಕೃಷಿ ಕುರಿತು ಭಾಷಣ ಮಾಡುವರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸರ್ಕಾರದಿಂದ ರೈತರಿಗೆ ಸಿಗುವ ಸವಲತ್ತುಗಳನ್ನು ಕುರಿತು ವಿಷಯ ಮಂಡಿಸುವರು.ಕರ್ನಾಟಕ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಎಂ ನಾಗರಾಜೇಗೌಡ ಬ್ಯಾಂಕುಗಳಿoದ ರೈತರಿಗೆ ಸಿಗುವ ಸೌಲಭ್ಯಗಳನ್ನು ಕುರಿತು ತಿಳಿಸುವರು.ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಎನ್. ಕೇಶವಮೂರ್ತಿ ಕೃಷಿ ಕುರಿತು ವಿಶೇಷ ಉಪನ್ಯಾಸ ನೀಡುವರು.ಹಾಗಾಗಿ ತಾಲ್ಲೂಕಿನ ಪ್ರಗತಿಪರ ರೈತರು, ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು ಪಕ್ಷಾತೀತವಾಗಿ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕತ್ತರಘಟ್ಟ ವಾಸು,ತಾಲ್ಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಅಂಚನಹಳ್ಳಿ ಸುಬ್ಬಣ್ಣ,ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್,ಎಂ.ಕೆ.ಹರಿಚರಣ್‌ ತಿಲಕ್, ಮಾಜಿ ಪುರಸಭಾ ಸದಸ್ಯ ಕೆ.ಆರ್.ನೀಲಕಂಠ,ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ್ ಸೂರ್ಯವಂಶ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

–ವರದಿ-ಶ್ರೀನಿವಾಸ್ ಆರ್

Leave a Reply

Your email address will not be published. Required fields are marked *

× How can I help you?