ಕೆ.ಆರ್.ಪೇಟೆ,ಮೇ.06: ಇದೇ ಮೇ.20ರಂದು ಈ ಸಾಲಿನ ಎಸ್.ಎಸ್. ಎಲ್.ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇದೇ ಮೇ.20ರಂದು ಬೆಳಿಗ್ಗೆ 10ಗಂಟೆಗೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಗಂಜಿಗೆರೆ ಮಹೇಶ್ ತಿಳಿಸಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 95ರಷ್ಟು, ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು, ಪದವಿ ಪರೀಕ್ಷೆಯಲ್ಲಿ ಶೇ.80ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳು, ಹಾಗೂ ಶೇ.100ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರು ಸೇರಿದಂತೆ ಪದವಿ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಬಿಎಂ ಹಾಗೂ ಇಂಜಿನಿಯರಿಂಗ್ ಪದವಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ನಗಧು ಬಹುಮಾನ ಟದೊಂದಿಗೆ ಸನ್ಮಾನಿಸಿ ಗೌರವಿಸಲಾಗುವುದು.

ಆರ್ಹ ವಿದ್ಯಾರ್ಥಿಗಳು ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯ ನಳಂದ ಕಾನ್ವೆಂಟ್ ಹತ್ತಿರದಲ್ಲಿರುವ ಟ್ರಸ್ಟ್ ಕಛೇರಿಗೆ ಮೇ.18ರ ಸಂಜೆ 05 ಗಂಟೆಯೊಳಗೆ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮಹೇಶ್ ಮನವಿ ಮಾಡಿದರು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ. ನಿರ್ಮಲಾನಂದನಾಥ ಸ್ವಾಮೀಜಿಗಳು ಸೇರಿದಂತೆ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಸಾಧಕರು, ಕೆಎಎಸ್, ಐ.ಎ.ಎಸ್, ಐಪಿಎಸ್ ಅಧಿಕಾರಿಗಳು ಹಾಗೂ ವಿವಿಧ ಉದ್ಯಮಿಗಳು ಸೇರಿದಂತೆ ವಿವಿಧ ಮಠಾ ಧೀಶರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಮಹೇಶ್ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪತ್ರಕರ್ತರಾದ ಕೆ.ಆರ್.ನೀಲಕಂಠ, ಹರಿಚರಣತಿಲಕ್, ಪುರ ಮಲೆ ಮಹದೇಶ್ವರ ಶ್ರೀ ಕ್ಷೇತ್ರದ ಗುರುಗಳಾದ ಶ್ರೀ ಬಸಪ್ಪ ಗುರುಗಳು ಮತ್ತಿತರರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.