ಕೆ.ಆರ್.ಪೇಟೆ-ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿ ಇತರರಿಗೆ ಮಾದರಿಯಾಗಬೇಕು-ಆರ್.ಟಿ.ಓ ಮಲ್ಲಿಕಾರ್ಜುನ್

ಕೆ.ಆರ್.ಪೇಟೆ-ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತಿರುವುದು ಆತಂಕಕಾರಿ ವಿಷಯವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು. ಜೊತೆಗೆ ದಾಖಲಾತಿ ಹೆಚ್ಚಳಕ್ಕೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಹಕಾರ ಪಡೆದುಕೊಳ್ಳಬೇಕು ಎಂದು ಆರ್.ಟಿ.ಓ ಅಧಿಕಾರಿ ಹಾಗೂ ಸಮಾಜಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಅವರು ಅಭಿಪ್ರಾಯಪಟ್ಟರು.

ಅವರು ಪಟ್ಟಣದ ಶಿಕ್ಷಕರ ಭವನದಲ್ಲಿ ಅಖಿಲ ಕರ್ನಾಟಕ ಶಿಕ್ಷಕರ ಪ್ರತಿಭಾ ವೇದಿಕೆ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ತುಂಬಿತುಳುಕುವoತಿತ್ತು. ಆದರೆ ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ನಮ್ಮ ಮಕ್ಕಳು ವ್ಯಾಸಂಗ ಮಾಡಿದರೆ ನಮ್ಮ ಗೌರವಕ್ಕೆ ಧಕ್ಕೆ ಬರುತ್ತದೆ ಎಂಬ ಕೀಳರಿಮೆಯಿಂದಾಗಿ ಪೋಷಕರು ಖಾಸಗೀ ಶಾಲೆಗಳತ್ತ ತಮ್ಮ ಮಕ್ಕಳನ್ನು ದಾಖಲು ಮಾಡುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾನ್ವಿತ ಶಿಕ್ಷಕರುಗಳಿದ್ದು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಅನೇಕ ಸವಲತ್ತುಗಳನ್ನು ನೀಡುತ್ತಿದ್ದರೂ ಪೋಷಕರು ಖಾಸಗಿ ಶಾಲೆಗಳ ಮೋಹಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಸರ್ಕಾರಿ ನೌಕರರು ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿ ಇತರರಿಗೆ ಮಾದರಿಯಾಗಬೇಕು. ಸರ್ಕಾರಿ ಶಾಲೆಗಳು ಪೋಷಕರನ್ನು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕಿದೆ. ಪ್ರತಿವರ್ಷ ಸರ್ಕಾರಿ ಶಾಲೆಗಳಲ್ಲಿ ಶೇ10% ದಾಖಲಾತಿ ಹೆಚ್ಚಳ ಮಾಡುವಂತೆ ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಇದೇ ವೇಳೆ ತಾಲ್ಲೂಕಿನಲ್ಲಿ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾಮಣಿ, ಹೇಮಲತಾ, ವಿದ್ಯಾಶ್ರೀ, ಎನ್.ಅನಿತಾ, ಶಶಿಕಲಾ.ಎನ್, ಅಶ್ವಿನಿ, ಎಚ್.ಎನ್.ಸುರೇಖಾ, ಕೃಷ್ಣನಾಯಕ್, ಮುತ್ತುರಾಜ್, ಡಿ.ಎಸ್.ಗಿರೀಶ್, ಮಾಕವಳ್ಳಿ ಕುಮಾರ್, ಟಿ.ಮಹೇಶ್, ಜಿ.ಎಸ್.ರವಿ, ವಿಜೇಂದ್ರ, ನಾಗರಾಜು, ಲವಣ್ಣ, ರಂಗನಾಥ್, ಆರ್.ಎನ್.ಶ್ರೀಧರ್, ಎಸ್.ಎನ್.ಮಂಜೇಗೌಡ, ಬಿ.ಆರ್.ಹರೀಶ್, ಎನ್.ಸಿ.ವೀರಪ್ಪ, ಸಿ.ರಾಜಯ್ಯ, ಮಾರೇನಹಳ್ಳಿ ಲೋಕೇಶ್, ಹೆಚ್.ಎಲ್.ಬಸವರಾಜು, ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಶಿಕ್ಷಕರಿಗೆ ಅಖಿಲ ಕರ್ನಾಟಕ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಕರ್ನಾಟಕ ಶಿಕ್ಷಕರ ಪ್ರತಿಭಾ ವೇದಿಕೆ ಅಧ್ಯಕ್ಷ ಜಿ.ಹೆಚ್.ಯೋಗೇಶ್, ತಾಲ್ಲೂಕು ಶಿಕ್ಷಕರ ಪ್ರತಿಭಾ ವೇದಿಕೆಯ ಗೌರವಾಧ್ಯಕ್ಷ ಆರ್.ಎಸ್.ಮೂರ್ತಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ನಿಕಟ ಪೂರ್ವ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಾರ್ಯದರ್ಶಿ ಪಿ.ಜೆ.ಕುಮಾರ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರತೇಜಸ್ವಿ, ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪದ್ಮೇಶ್, ಲೋಕೇಶ್, ಶ್ರೀನಿವಾಸ್, ತಾಲ್ಲೂಕು ಪ.ಜಾ-ಪ.ಪಂ. ನೌಕರರ ಸಂಘದ ಅಧ್ಯಕ್ಷ ಯೋಗೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಕೆ.ಶಿವಲಿಂಗೇಗೌಡ, ಮೋಹನಕುಮಾರಿ, ಕರ್ನಾಟಕ ಶಿಕ್ಷಕರ ಪ್ರತಿಭಾ ವೇದಿಕೆಯ ಕಾರ್ಯದರ್ಶಿ ಆರ್.ಎಸ್.ಮೂರ್ತಿ, ರಾಮಚಂದ್ರು. ಬಿ.ಎಸ್.ಮಹೇಶ್, ಬಸವರಾಜು, ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

——–——-ಶ್ರೀನಿವಾಸ್ ಕೆ ಆರ್ ಪೇಟೆ

Leave a Reply

Your email address will not be published. Required fields are marked *

× How can I help you?