ಕೆ.ಆರ್.ಪೇಟೆ- ಆರ್.ಟಿ.ಓ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ


ಕೆ.ಆರ್.ಪೇಟೆ-ಮೇ.20: ತಾಲ್ಲೂಕು ಆರ್.ಟಿ.ಓ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್, ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೇ.20ರ ಮಂಗಳವಾರ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಟ್ರಸ್ಟ್ ಕಛೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಹಾಗೂ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವೈ.ಪಿ.ಧರ್ಮೇಂದ್ರ ತಿಳಿಸಿದರು.

ಅವರು ಸಮಾಜ ಸೇವಕರು ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ, ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಮಿಂಟೋ ಕಣ್ಣಿನ ಆಸ್ಪತ್ರೆ, ಕೆಂಪೇಗೌಡ ದಂತ ಆಸ್ಪತ್ರೆಗಳ ಸಹಯೋಗದಲ್ಲಿ ತಜ್ಞ ವೈದ್ಯರ ನೇತೃತ್ವದಲ್ಲಿ ಬೃಹತ್ ಆರೋಗ್ಯ ತಪಾಸಣೆ ಹಾಗೂ ಉಚಿತ ಓಷದ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿನ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧರ್ಮೇಂದ್ರ ವಿವರಿಸಿದರು.‌

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದ್ರೋಗ ತಪಾಸಣೆ, ನರರೋಗ ತಪಾಸಣೆ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾಂಗ, ಕ್ಯಾನ್ಸರ್, ದಂತ ವೈದ್ಯ ತಪಾಸಣೆ, ಕೀಲು ಹಾಗೂ ಮೂಳೆ ರೋಗದ ತಪಾಸಣೆ, ಗರ್ಭಕೋಶ ಹಾಗೂ ಮಹಿಳಾ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು. ಆದ್ದರಿಂದ ಕೃಷ್ಣರಾಜಪೇಟೆ ತಾಲೂಕಿನ ಸಾರ್ವಜನಿಕರು ಹಾಗೂ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉಚಿತವಾಗಿ ತಜ್ಞ ವೈದ್ಯರಿಂದ ದೊರೆಯುತ್ತಿರುವ ಆರೋಗ್ಯ ಸೇವೆಯನ್ನು ಪಡೆದುಕೊಂಡು ನೂರ್ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಧರ್ಮೆಂದ್ರ ಮನವಿ ಮಾಡಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದವರು, ಪಿಯುಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಪಡೆದವರು, ಪದವಿ ಪರೀಕ್ಷೆಯಲ್ಲಿ ಶೇ.80ರಷ್ಟು ಅಂಕ ಪಡೆದವರು ಇಂಜಿನಿಯರಿಂಗ್ ಪದವೀಧರರು ತಮ್ಮ ಮೂಲ ಅಂಕಗಳ ಜರಾಕ್ಸ್, ಆಧಾರ್ ಹಾಗೂ ಪಾಸ್ ಪೋರ್ಟ್ ಅಳತೆ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಆದಿಚುಂಚನಗಿರಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಜಿ.ಎನ್. ಸೋಮಶೇಖರ್, ವೈ.ಎಸ್. ಶಿವಕುಮಾರ್, ಟಿ.ಎಸ್. ಪಾಂಡು, ಶ್ರೀ.ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗಂಜಿಗೆರೆ ಮಹೇಶ್, ಟ್ರಸ್ಟಿನ ಗೌರವ ಅಧ್ಯಕ್ಷ ಜಯರಾಮ್ ನೆಲ್ಲಿತ್ತಾಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣ ಚಂದ್ರ ತೇಜಸ್ವಿ, ಸಮಾಜ ಸೇವಕರಾದ ಆರ್.ಟಿ.ಈ ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.

  • ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *