ಕೆ.ಆರ್.ಪೇಟೆ:ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಲು ಸಾಧ್ಯ.ಹಾಗಾಗಿ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ್ಕೆ ಗುಣಶ್ರೀ ಶಾಲಾ ವಿದ್ಯಾರ್ಥಿಗಳಿಗೆ ತಿಳಿಸಿದರು .
ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ವಿಠಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ದುಶ್ಚಟಗಳಿಂದ ದೂರವಿರವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವ ಪೀಳಿಗೆ ದುರಭ್ಯಾಸಗಳ ದಾಸರಾಗುತ್ತಿದ್ದಾರೆ.ಶಾಲಾ ಹಂತದಲ್ಲಿಯೇ ಇಂತಹ ಕಾರ್ಯಕ್ರಮ ನಡೆಸುವುದರಿಂದ ಅದಕ್ಕೆ ಕಡಿವಾಣ ಹಾಕಬಹುದು.ಹದಿ-ಹರೆಯದವರು ದುಶ್ಚಟಗಳನ್ನು ಕಲಿತು ವಿದ್ಯಾರ್ಥಿ ಜೀವನದಲ್ಲಿಯೇ ದಾರಿ ತಪ್ಪುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗಡೆ ರವರ ಮಾರ್ಗದರ್ಶನದಲ್ಲಿ ಇಂತಹ ಕಾರ್ಯಕ್ರಮ ಕೈಗೊಳ್ಳುತ್ತಿದ್ದೇವೆ.
ಮದ್ಯಪಾನ,ಧೂಮಪಾನದಿಂದ ದೂರವಿರುವ ಮೂಲಕ ಮನೆಯಲ್ಲಿ ಒಳ್ಳೆಯ ವಾತಾವರಣವಿರುವಂತೆ ನೋಡಿಕೊಳ್ಳಬೇಕು.ಸ್ವಾತಂತ್ರ್ಯ ಪೂರ್ವದಲ್ಲಿ ನೂರಕ್ಕೆ ಮೂರು ಜನ ಮಾತ್ರ ದುಶ್ಚಟಗಳಿಗೆ ಬಲಿಯಾಗುತ್ತಿದ್ದರು.ಆದರೆ ಈಗ ನೂರಕ್ಕೆ ತೊಂಬತ್ತು ಜನರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ.ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ,ಹಾಗಾಗಿ ಇದರಿಂದ ದೂರವಿರಬೇಕು ಎಂದರು.
ಶಾಲಾ ಶಿಕ್ಷಕ ಯೋಗೇಶ್.ಶಿಕ್ಷಕಿ ದೀಪಿಕಾ,ಕೃಷಿ ಮೇಲ್ವಿಚಾರಕ ಪ್ರವೀಣ್,ಸೇವಾ ಪ್ರತಿನಿಧಿ ಶಶಿಕಲಾ ಕಾರ್ಯಕ್ರಮದಲ್ಲಿ ಹಾಜರಿದ್ದರು.
———————-ಮನು ಮಾಕವಳ್ಳಿ ಕೆ ಆರ್ ಪೇಟೆ