ಕೆ.ಆರ್.ಪೇಟೆ-ಇದೇ ತಿಂಗಳು ಡಿ.14ಮತ್ತು15ರಂದು ತಾಲ್ಲೂಕು ಸಂತೇಬಾಚಹಳ್ಳಿ ಹೋಬಳಿಯ ಬೆಡದಹಳ್ಳಿ ಶ್ರೀ ಪಂಚಭೂತೇಶ್ವರ ಶ್ರೀಕ್ಷೇತ್ರದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಧಾರ್ಮಿಕ ಸಮ್ಮೇಳನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪಂಚಶ್ರೀ ಪ್ರಶಸ್ತಿ ಪ್ರಧಾನ, ಪೌರಕಾರ್ಮಿಕರು ಹಾಗೂ ಹಿರಿಯ ನಾಗರಿಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಭಾರತೀಪುರ ಕ್ರಾಸ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಡದಹಳ್ಳಿ ಶ್ರೀ ಪಂಚಭೂತೇಶ್ವರ ಶ್ರೀ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಪೀಠಾಧಿಪತಿ ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಅವರು ಶ್ರೀ ಪಂಚಭೂತೇಶ್ವರ ಸುಕ್ಷೇತ್ರದ ಆವರಣದಲ್ಲಿ ಕಾರ್ಯಕ್ರಮದ ಆಹ್ವಾನಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಡಿ.14ರಂದು ಶನಿವಾರ ಹುಣಸೂರಿನ ದೇವನೂರು ಮಹಾಸಂಸ್ಥಾನ ಮಠದ ಡಾ.ಶ್ರೀ ಮಾದೇಶ್ ಗುರೂಜಿ ದಿವ್ಯ ಸಾನಿಧ್ಯದಲ್ಲಿ,ಪರಮಪೂಜ್ಯ ಶ್ರೀ ಡಾ.ಹನುಮಂತ ನಾಥ ಸ್ವಾಮೀಜಿ ಹಾಗೂ ಶಂಭುನಾಥ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನೇತೃತ್ವದಲ್ಲಿ ಗಣಪತಿ ಹೋಮ,ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ.ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಅಧ್ಯಕ್ಷತೆಯನ್ನು ಶಾಸಕ ಹೆಚ್ ಟಿ ಮಂಜು ವಹಿಸಲಿದ್ದಾರೆ.ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಶಿವಬಸವ ಸ್ವಾಮೀಜಿ ಹಾಗೂ ಶ್ರೀ ರಾಮಯೋಗೀಶ್ವರ ಮಠ ಬೇಬಿ ಮಠ ದಿವ್ಯ ಉಪಸ್ಥಿತರಿರುವರು.
ಡಿ.15ರಂದು ಭಾನುವಾರ ರಂದು ಧಾರ್ಮಿಕ ಸಮ್ಮೇಳನ ಜಾಗೃತಿ ಸಮಾವೇಶವು ಶ್ರೀ ಮನ್ನಿರಂಜನ ಪ್ರಣವಸ್ವರೂಪಿ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು,ಸುಕ್ಷೇತ್ರ ಕೋಡಿಮಠ ಹಾರನಹಳ್ಳಿ ಅರಸೀಕೆರೆ ಶ್ರೀ ಡಾ.ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು, ಶ್ರೀ ಕ್ಷೇತ್ರ ಜೈನ ಮಠ ಶ್ರವಣಬೆಳಗೊಳ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಸ್ವಾಮೀಜಿ, ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠ ಕೃಷ್ಣರಾಜನಗರ ಶ್ರೀ ಶಿವಾನಂದಪುರಿ ಸ್ವಾಮೀಜಿ ಮತ್ತು ಚಂದ್ರವನ ಆಶ್ರಮ ಶ್ರೀರಂಗಪಟ್ಟಣ ಪರಮಪೂಜ್ಯ ಶ್ರೀ ಡಾ.ತ್ರಿನೇತ್ರಮಹಾಂತ ಶಿವಯೋಗಿ ಸ್ವಾಮೀಜಿ ದಿವ್ಯಸಾನಿಧದಯದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹೆಚ್ ಟಿ ಮಂಜು ವಹಿಸುತ್ತಾರೆ. ಘನ ಉಪಸ್ಥಿತಿ ಮಾಜಿ ಸಚಿವ ಡಾ.ನಾರಾಯಣಗೌಡ ಮತ್ತು ಮಾಜಿ ಶಾಸಕ ಕೆ ಬಿ ಚಂದ್ರಶೇಖರ್ ರವರುಗಳದ್ದಿರುತ್ತದೆ.
ಇದೇ ಸಮಯದಲ್ಲಿ ಪಂಚಶ್ರೀ ಪ್ರಶಸ್ತಿ ಪುರಸ್ಕೃತರಾದ ಮದ್ದೂರು ವಿಶೇಷ ಚೇತನ ಒಲಂಪಿಕ್ ಕ್ರೀಡಾಪಟು ಡಾ.ರಾಜಣ್ಣ,ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ ನಾಗಣ್ಣಗೌಡ,ಆರ್ ಟಿ ಓ ಸಂಘದ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ್,ಧ್ವನಿ ಮಹಿಳಾ ಸಂಸ್ಥೆ ಮಹಿಳಾ ಹೋರಾಟಗಾರ್ತಿ ರಜನಿರಾಜ್ ಮತ್ತು ಸಮಾಜ ಸೇವಕ ಕುಂದೂರು ಗ್ರಾಮದ ಮೊಟ್ಟೆ ಮಂಜು ಅವರಿಗೆ ಪಂಚಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದ್ದರಿಂದ ತಾಲ್ಲೂಕಿನ ಸುಕ್ಷೇತ್ರದ ಅಭಿಮಾನಿಗಳು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ರುದ್ರಮುನಿ ಸ್ವಾಮೀಜಿ ತಿಳಿಸಿದರು.
ಪತ್ರಿಕಾಘೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಕಾಂತರಾಜು,ಬಿಜೆಪಿ ಉಪಾಧ್ಯಕ್ಷ ಭಾರತೀಪುರ ಪುಟ್ಟಣ್ಣ ಉಪಸ್ಥಿತರಿದ್ದರು.
——————ಶ್ರೀನಿವಾಸ್ ಕೆ ಆರ್ ಪೇಟೆ