ಕೆ.ಆರ್.ಪೇಟೆ-ಧಕ್ಷ ತಹಸೀಲ್ದಾರ್ ಎಸ್.ಯು.ಅಶೋಕ್ ರವರು ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಹೆಮ್ಮೆ-ಎ.ಎಸ್.ರಮೇಶ್

ಕೆ.ಆರ್.ಪೇಟೆ-ತಾಲ್ಲೂಕಿನ ತಹಸೀಲ್ದಾರ್ ಆಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಮೂಲಕ ರೈತರು ಮತ್ತು ಜನ ಸಾಮಾನ್ಯರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುತ್ತಿರುವ ನೂತನ ತಹಸೀಲ್ದಾರ್ ಎಸ್.ಯು.ಅಶೋಕ್ ಅವರನ್ನು ತಾಲ್ಲೂಕು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷರಾದ ಅಘಲಯ ಎ.ಎಸ್.ರಮೇಶ್ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ದೇಶ ಸೇವೆ ಸಲ್ಲಿಸಿ ನಂತರ ಕೆ.ಎ.ಎಸ್.ಪರೀಕ್ಷೆ ಬರೆದು ತಹಸೀಲ್ದಾರ್ ಆಗಿ ನೇಮಕಗೊಂಡು ಮೈಸೂರು, ನಂಜನಗೂಡು, ಮಡಿಕೇರಿ ಮತ್ತಿತರರ ಕಡೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ತಹಸೀಲ್ದಾರ್ ಎಸ್.ಯು.ಅಶೋಕ್ ಅವರು ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಸೇವೆ ಸಲ್ಲಿಸುವ ಮೂಲಕ ರಾಜ್ಯ ಮಟ್ಟದ ಉತ್ತಮ ತಹಸೀಲ್ದಾರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇಂತಹ ಅಪರೂಪದ ಅಧಿಕಾರಿ ನಮ್ಮ ಕೆ.ಆರ್.ಪೇಟೆ ತಾಲ್ಲೂಕಿನ ತಹಸೀಲ್ದಾರ್ ಆಗಿ ಬಂದಿರುವುದು ನಮ್ಮ ತಾಲ್ಲೂಕಿಗೆ ಹೆಮ್ಮೆ ತರುವ ವಿಚಾರವಾಗಿದೆ.

ತಾಲ್ಲೂಕಿನಲ್ಲಿ ರೈತರ ಕೆಲಸಗಳನ್ನು ಸಕಾಲದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿಕೊಡುವ ಮೂಲಕ ಒಳ್ಳೆಯ ಹೆಸರು ಪಡೆದಿದ್ದಾರೆ. ಇವರಿಗೆ ಗ್ರೇಡ್-2ತಹಸೀಲ್ದಾರ್ ಲೋಕೇಶ್ ಸೇರಿದಂತೆ ಎಲ್ಲಾ ನೌಕರರು ಸಹಕಾರ ನೀಡುತ್ತಿರುವುದು ಇವರ ಕಾರ್ಯದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದಿರುವ ಕಾರಣ ಅರ್ಪಣಾ ಭಾವನೆಯಿಂದ ಬೆಳಿಗ್ಗೆ 10ಗಂಟೆಯಿoದ ಸಂಜೆ 6ಗಂಟೆಯವರೆವಿಗೂ ರೈತರ ಕೆಲಸ ಮಾಡಿಕೊಡುತ್ತಿದ್ದಾರೆ. ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೇ ನೇರವಾಗಿ ರೈತರೇ ಬಂದು ಕೆಲಸ ಮಾಡಿಸಿಕೊಂಡು ಹೋಗುವಂತಹ ವಾತಾವರಣವನ್ನು ಸೃಷ್ಟಿಸಿದ್ದಾರೆ. ರೈತರಿಗೆ ದಿನದ ಯಾವುದೇ ಸಮಯದಲ್ಲಿ ಬೇಟಿ ಮಾಡುವ ಅವಕಾಶ ಕಲ್ಪಿಸಿಕೊಟ್ಟಿದ್ದು ಇದು ರೈತರಲ್ಲಿ ಹರ್ಷದ ವಾತಾವರಣವನ್ನು ಸೃಷ್ಟಿಸಿದೆ ಎಂದು ಅಘಲಯ ರಮೇಶ್ ಮೆಚ್ಚುಗೆಯ ಮಾತುಗಳನ್ನಾಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಎಸ್.ಯು.ಅಶೋಕ್ ಅವರು,ತಾಲ್ಲೂಕಿನ ಜನತೆ ನನ್ನನ್ನು ತಮ್ಮ ಊರಿನ ಮನೆ ಮಗನಂತೆ ಕಾಣುತ್ತಿದ್ದು,ಯಾವುದೇ ಊರಿಗೆ ಹೋದರೂ ಅತ್ಯಂತ ಪ್ರೀತಿ-ವಿಶ್ವಾಸಗಳಿಂದ ಸ್ವಾಗತಿಸುತ್ತಿದ್ದಾರೆ. ಹಿರಿಯ ಸಾಹಿತಿಗಳಾದ ಕೆ.ಎಸ್.ನರಸಿಂಹಸ್ವಾಮಿ, ಎ.ಎನ್.ಮೂರ್ತಿರಾಯರು ಸೇರಿದಂತೆ ಹಲವು ಸಾಹಿತಿಗಳ ನೆಲವೀಡಾಗಿರುವ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ನನಗೆ ಹೆಮ್ಮೆ ಎನಿಸುತ್ತದೆ. ಎಲ್ಲಾ ಜನತೆ ನಮಗೆ ಉತ್ಸಾಹದಿಂದ ಕೆಲಸ ಮಾಡಲು ಸಹಕಾರ ನೀಡುತ್ತಿದ್ದಾರೆ. ನಮ್ಮ ಇಲಾಖೆಯಿಂದ ಯಾವುದೇ ಲೋಪ ಉಂಟಾದಲ್ಲಿ ನೇರವಾಗಿ ನಮಗೆ ತಿಳಿಸಿದರೆ ಅದನ್ನು ಸರಿಪಡಿಸಿ ಪಾರದರ್ಶಕ ಸೇವೆ ನೀಡಲು ಕಾರ್ಯಪ್ರವೃತ್ತನಾಗುತ್ತೇನೆ. ಹಿಂದೆ ದೇಶ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಈಗ ತಹಸೀಲ್ದಾರ್ ಆಗಿ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನಗೆ ದೇವರು ಕೊಟ್ಟ ವರ ಎಂದು ಭಾವಿಸಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಎನ್.ಎಸ್.ಗಂಗಾಧರ್, ಕೃಷಿ ಸಮಾಜದ ಜಿಲ್ಲಾ ನಿರ್ದೇಶಕ ಹೆಚ್.ಜೆ.ನಾರಾ ಯಣಗೌಡ, ನಾರಾಯಣಪುರ ಮಂಜೇಶ್, ಗ್ರೇಡ್-೨ ತಹಸೀಲ್ದಾರ್ ಲೋಕೇಶ್, ರಾಜಸ್ವ ನಿರೀಕ್ಷಕಿ ಚಂದ್ರಕಲಾ ಪ್ರಕಾಶ್, ಮುಜರಾಯಿ ವಿಷಯ ನಿರ್ವಾಹಕಿ ಪೂರ್ಣಿಮಾ, ತಾಲ್ಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

———–—–ಶ್ರೀನಿವಾಸ್ ಆರ್

Leave a Reply

Your email address will not be published. Required fields are marked *

× How can I help you?