ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ 8 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು, 4 ಮಂದಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದರು.
ಜೆಡಿಎಸ್ ಪಕ್ಷದ ಮುಖಂಡರಾದ ಎ.ಆರ್.ರಘು ಅವರ ನೇತೃತ್ವದಲ್ಲಿ ಚುನಾವಣೆ ಎದುರಿದ್ದ ಜೆಡಿಎಸ್ ಮತ್ತು ಬಿಜೆಪಿ-ಮೈತ್ರಿ ಪಕ್ಷಗಳ ಅಭ್ಯರ್ಥಿಗಳಾದ ಸಾಲಗಾರರ ಕ್ಷೇತ್ರದಿಂದ ಉದಯಕುಮಾರ್, ಎ.ಜೆ.ಕುಮಾರ್, ವಾಸುರಾಜೇಗೌಡ, ಕೆ.ಗಂಗರಾಜು(ಗುರು), ಸುಬ್ಬಯ್ಯ, ಸುಜಾತ, ಯೋಗೇಶ್, ಕೆ.ರಾಜೇಶ್(ಸಾಲಗಾರರಲ್ಲದ ಕ್ಷೇತ್ರ) ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಎ.ಎಸ್.ಮಹಾಲಿಂಗು, ಎಲ್.ಚಂದ್ರಪ್ಪ, ಡಿ.ಎಂ.ಜಗದೀಶ್‌ಪಾಟೀಲ್, ಅನುಸೂಯ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶರನ್ನು ಶಾಸಕ ಹೆಚ್.ಟಿ.ಮಂಜು, ತಾಲ್ಲೂಕು ಪಿ.ಎಲ್.ಡಿ.ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾದ ಎ.ಆರ್.ರಘು, ವಕೀಲ ಕೇಶವ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರನಾಯಕ್, ಜಿ.ಪಂ.ಮಾಜಿ ಸದಸ್ಯರಾದ ಗೌರಮ್ಮಶ್ರೀನಿವಾಸ್, ಗ್ರಾ.ಪಂ.ಅಧ್ಯಕ್ಷ ಎ.ಎಸ್.ಹರೀಶ್, ಗ್ರಾ.ಪಂ.ಸದಸ್ಯ ಅತೀಕ್ ಅಹಮದ್ ಸೇರಿದಂತೆ ಹಲವು ಮುಖಂಡರು ಅಭಿನಂದಿಸಿದರು.

ಈ ವೇಳೆ ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ತಾಲ್ಲೂಕು ಪಿ.ಎಲ್.ಡಿ.ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾದ ಎ.ಆರ್.ರಘು ಅವರು ನಮ್ಮ ಅಕ್ಕಿಹೆಬ್ಬಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಬರೋಬ್ಬರಿ 8 ಮಂದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿಗೆ ಕಾರಣಕರ್ತರಾದ ಸಂಘದ ವ್ಯಾಪ್ತಿಯ ಎಲ್ಲಾ ಜೆಡಿಎಸ್-ಬಿಜೆಪಿ ಪಕ್ಷದ ಮುಖಂಡರಿಗೆ ಹಾಗೂ ಮತದಾರ ಬಂಧುಗಳು ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
-ಶ್ರೀನಿವಾಸ್ ಆರ್.