ಕೆ.ಆರ್.ಪೇಟೆ-ಬೇಡಿಕೆಗಳ ಈಡೇರಿಸದೇ ಕೈಕೊಟ್ಟ ಸರಕಾರ-ಮತ್ತೆ ಪ್ರತಿಭಟನೆಗಿಳಿದ ಗ್ರಾಮ ಆಡಳಿತ ಅಧಿಕಾರಿಗಳು-‘ಸಕಾಲ’ಕ್ಕೆ ಕೆಲಸ ಗಳಾಗದೆ ಕಂಗಾಲಾದ ಸಾರ್ವಜನಿಕರು

ಕೆ.ಆರ್.ಪೇಟೆ-ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಮಂಡ್ಯ ಜಿಲ್ಲಾ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ಹರೀಶ್ ನೇತೃತ್ವದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದರು.

ಮಂಡ್ಯ ಜಿಲ್ಲಾ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ಹರೀಶ್ ಮಾತನಾಡಿ, ರಾಜ್ಯ ಸಂಘದ ನಿರ್ದೇಶನಂತೆ  ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ನಮ್ಮ ನ್ಯಾಯಯುತವಾಗಿ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಕೂಡಲೇ ಈಡೇರಿಸಬೇಕು. ಬಡವರ ಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಬೇಡಿಕೆಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಕೂಡಲೇ ಗಮನ ಹರಿಸಿ ಈಡೇರಿಬೇಕು. ನಮ್ಮ ಕರ್ತವ್ಯದ ಸಮಯದಲ್ಲಿ ಸೇವೆಗೆ ಅಗತ್ಯವಾಗಿ ಬೇಕಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾನರ್ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಬೇಕು. ನಮಗೆ ಅಗತ್ಯವಾಗಿ ಬೇಕಾದ ಸೌಲಭ್ಯಗಳನ್ನು ನೀಡಿ ನಿಗಧಿತ ಸಮಯದಲ್ಲಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಬೇಕು. ಅನಗತ್ಯವಾಗಿ ಒತ್ತಡ ಹೇರಬಾರದು . ಆದರೆ ನಮಗೆ ಸೇವಾ ಸೌಲಭ್ಯ ಮತ್ತು ಭದ್ರತೆ ನೀಡುತ್ತಿಲ್ಲ, ಮಾನಸಿಕವಾಗಿ ಒತ್ತಡ ಹೇರಿ ಕಿರುಕುಳ ನೀಡಲಾಗುತ್ತಿದೆ. ಒಂದು ತಿಂಗಳು ಸಮಯಾವಕಾಶ ನೀಡಿ ಮಾಡುತ್ತಿದ್ದ ಪೌತಿಖಾತೆ ಬದಲಾವಣೆಯನ್ನು ಒಂದು ವಾರದ ಮಿತಿಗೆ ಇಳಿಸಿರುವುದು ಸರಿಯಾದ ಕ್ರಮವಲ್ಲ.ಆದ್ದರಿಂದ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಒಂದು ತಿಂಗಳ ಅವಧಿಗೆ ಮತ್ತೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ತಮ್ಮ ಕೆಲಸಕ್ಕೆ ಬಳಸುವ ಮೊಬೈಲ್ ಆಫ್ ಗಳನ್ನು ಸಾಮೂಹಿಕವಾಗಿ ಡಿಲೀಟ್ ಮಾಡಿ ಕೈಗೆ ಕಪ್ಪುಬಟ್ಟೆ ಧರಿಸಿದ ಗ್ರಾಮ ಆಡಳಿತ ಅಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಕೃಷ್ಣರಾಜಪೇಟೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ದಶರಥ ಪೂಜಾರಿ, ತಾಲ್ಲೂಕು ಉಪಾಧ್ಯಕ್ಷ ರಾಘವೇಂದ್ರ, ಗೌರವ ಸಲಹೆಗಾರ ಸುಧಾಕರ್, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಸೋಮಾಚಾರಿ, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ಕೆ.ಸಾವಿತ್ರಿ, ಕಾರ್ಯದರ್ಶಿ ಬಿ.ಹೊನ್ನೇಶ್,  ಖಜಾಂಚಿ ಕಾವ್ಯಗೌಡ, ನಿರ್ದೇಶಕರಾದ ಮಧು, ಶ್ವೇತ, ಪೂಜಾ, ಕಾಂತೇಶ್, ಸೇರಿದಂತೆ ತಾಲೂಕಿನ ಎಲ್ಲಾ ವೃತ್ತಗಳ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ತೊಂದರೆ:

ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಗ್ರಹಿಸಿ ಅನಿರ್ನಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರು ತಮ್ಮ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಕಂಗಾಲಾಗಿದ್ದಾರೆ. ಕೂಡಲೇ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

————ಶ್ರೀನಿವಾಸ್ ಆರ್

Leave a Reply

Your email address will not be published. Required fields are marked *

× How can I help you?