ಕೆ.ಆರ್.ಪೇಟೆ – ತಾಲ್ಲೂಕಿನ ಸಮಾಜ ಸೇವಕರು, ಮಿತ್ರ ಫೌಂಡೇಶನ್ ಅಧ್ಯಕ್ಷರು ಹಾಗೂ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ ಅವರು ತಾಲ್ಲೂಕು ಪಿ.ಎಲ್.ಡಿ. ಬ್ಯಾಂಕ್ ಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ ಅವರು ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷವು ಪ್ರಬಲವಾಗಿ ಬೆಳೆಯುತ್ತಿದೆ. ಸೊಸೈಟಿ ಚುನಾವಣೆಯಲ್ಲಿ, ಡೇರಿಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಗಳಿಗಿಂತ ಉತ್ತಮ ಫಲಿತಾಂಶವನ್ನು ಕಾಂಗ್ರೆಸ್ ಪಕ್ಷವು ಪಡೆದುಕೊಳ್ಳುವ ಮೂಲಕ ಸಹಕಾರ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸಾಧನೆ ಹೆಚ್ಚಾಗುತ್ತಿದೆ. ಇದೇ ರೀತಿ ಮುಂಬರುವ ಜಿ.ಪಂ.ತಾ..ಪಂ.ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೋಡಿಮಾರನಹಳ್ಳಿ ದೇವರಾಜು, ಮಧವಪ್ರಸಾದ್, ಅಗಸರಹಳ್ಳಿ ಗೋವಿಂದರಾಜು, ಕಟ್ಟೆಕ್ಯಾತನಹಳ್ಳಿ ಪಾಪಣ್ಣ, ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕ ಬಣ್ಣೇನಹಳ್ಳಿ ಧನಂಜಯ, ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ. ಸಮಘದ ಅಧ್ಯಕ್ಷ ಗಾಡಿಗನಹಳ್ಳಿ ಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.