ಕೆ.ಆರ್.ಪೇಟೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಸಬಲೀಕರಣಕ್ಕೆ ವರದಾನವಾದ ಯೋಜನೆಗಳಾಗಿವೆ ಎಂದು ಎಂದು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.
ಅವರು ಕೆ.ಆರ್.ಪೇಟೆ ತಾಲ್ಲೂಕಿನ ಗಂಜಿಗೆರೆ ಬಳಿ ಇರುವ ವಿಶ್ವವಿಖ್ಯಾತ ಭೂವರಹನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಕೆ.ಆರ್.ಪೇಟೆ ಪಟ್ಟಣದಲ್ಲಿರುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಮಾನಿಗಳು ನೀಡಿದ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಪಕ್ಷವು ಮಹಾರಾಷ್ಟ್ರ, ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ನಮ್ಮ ಕರ್ನಾಟಕದ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ನಮ್ಮ ಗ್ಯಾರಂಟಿ ಯೋಜನೆಗಳು ಬಡವರ ಪರವಾದ ಯೋಜನೆಗಳಾಗಿವೆ ಅಭಿಮಾನದಿಂದ ಹೇಳಿದರು.
ನಮ್ಮ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರಸಿದ್ದ ದೇವಾಲಯಗಳ ಆಧಾಯ ಹೆಚ್ಚಳವಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಯಾಗಿದೆ. ಹೋಟೆಲ್ ಉದ್ಯಮ ಹೆಚ್ಚು ಆಧಾಯ ಗಳಿಸುತ್ತಿದೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಆರ್ಥಿಕ ಸಹಾಯವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಬಡವರು ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಬಲೀಕರಣ ಸಾಧ್ಯವಾಗಿದೆ.

ಅನ್ನಭಾಗ್ಯ ಯೋಜನೆಯಿಂದ ಬಡವರು- ಮಧ್ಯಮ ವರ್ಗದವರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಗೃಹ ಜ್ಯೋತಿ, ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಹೀಗೆ ಐದೂ ಗ್ಯಾರಂಟಿ ಯೋಜನೆಗಳಿಂದ ಕೋಟಿ ಕೋಟಿ ಜನರಿಗೆ ಅನುಕೂಲವಾಗಿದೆ. ಈ ಪಂಚ ಗ್ಯಾರಂಟಿ ಯೋಜನೆಗಳು ಐದು ವರ್ಷಗಳ ಕಾಲ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಆದರೂ ವಿರೋಧ ಪಕ್ಷಗಳು ಈಗ ನಿಲ್ಲುತ್ತವೆ. ಆಗ ನಿಲ್ಲುತ್ತವೆ ಎಂದು ಟೀಕಿಸುವ ಮೂಲಕ ಕಾಲ ಕಳೆಯುತ್ತಿವೆ. ಹಾಗಾಗಿ ಗ್ಯಾರಂಟಿ ಯೋಜನೆಗಳ ಫಲಾನಭವಿಗಳು ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬುದರ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ಅಭಯ ನೀಡಿದರು.

ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ತಾ.ಪಂ.ಮಾಜಿ ಸದಸ್ಯ ಸಣ್ಣನಿಂಗೇಗೌಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಕೆ.ಪುರುಷೋತ್ತಮ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಸಿಮೆಂಟ್ ಮಂಜು, ಪುರಸಭೆಯ ಮಾಜಿ ಅಧ್ಯಕ್ಷೆ ಶಕುಂತಲಾರವಿಕುಮಾರ್, ಮಹಾರಾಷ್ಟ್ರ ಕುರುಬರ ಸಂಘದ ಅಧ್ಯಕ್ಷ ಯೋಗೇಶ್, ಹಿರಿಯ ಮುಖಂಡರಾದ ಎಲ್.ಪಿ.ನಂಜಪ್ಪ, ಶಿವಪ್ಪ, ವೆಂಕಟಪ್ಪ, ಜಿ.ಎ.ರಾಯಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷ ಗುಡುಗನಹಳ್ಳಿ ಶ್ರೀನಿವಾಸ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಹಾಗೂ ವಿ.ಎಸ್.ಎಸ್.ಎನ್.ನಿರ್ದೇಶಕ ಆಲಂಬಾಡಿಕಾವಲು ಎ.ರಾಜು, ಸೋಮನಹಳ್ಳಿ ವಿ.ಎಸ್.ಎಸ್.ಎನ್.ಬ್ಯಾಂಕ್ ಅಧ್ಯಕ್ಷ ಎಸ್.ಸಿ.ಬೋಜರಾಜು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಲತಾ, ಶಿವಮ್ಮ, ರೂಪ, ಉಮೇಶ್, ಸಿ.ಆರ್.ಪಿ.ಕುಮಾರ್, ಮಡುವಿನಕೋಡಿ ಉಮೇಶ್, ಯುವ ಮುಖಂಡರಾದ ಮಾಕವಳ್ಳಿ ಸುಮಿತ್, ಅತೀಕ್, ಕಟ್ಟಹಳ್ಳಿ ಸುರೇಶ್, ಮಾರ್ಗೋನಹಳ್ಳಿ ಪ್ರದೀಪ್, ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.