ಕೊಪ್ಪ :ಪಟ್ಟಣ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಗಾಯತ್ರಿ ವಸಂತ್ ಮತ್ತು ಉಪಾಧ್ಯಕ್ಷರಾಗಿ ಗಾಯತ್ರಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಗಾಯತ್ರಿ ವಸಂತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗಾಯತ್ರಿ ಶೆಟ್ಟಿಯವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅವಿರೋಧ ಆಯ್ಕೆ ಘೋಷಿಸಿದರು.
ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ,,ಮಾಜಿ ಸಚಿವ ಡಿ.ಎನ್ ಜೀವರಾಜ್, ಕೊಪ್ಪ ಮಂಡಲ ಅಧ್ಯಕ್ಷರಾದ ದಿನೇಶ್ ಹೊಸೂರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಎಸ್.ಎನ್ ರಾಮಸ್ವಾಮಿ ಮತ್ತು ಪುಣ್ಯಪಾಲ್ ನೂತನವಾಗಿ ಆಯ್ಕೆಯಾದವರಿಗೆ ಶುಭ ಕೋರಿದರು.
—————–ಹರೀಶ್ ನಾರ್ವೆ