ಕೊಟ್ಟಿಗೆಹಾರ: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ನೇಮಕವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮೇಲ್ವಿನ್ ಅವರುಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆ.ಪಿ. ಸಿ.ಸಿ ಯ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ ಅವರ ಪಕ್ಷ ನಿಷ್ಠೆಗೆ ಈಗ ಉನ್ನತ ಹುದ್ದೆ ಒಲಿದಿದೆ.