ಕೆ.ಆರ್.ಪೇಟೆ: ಪಟ್ಟಣದ ಹೇಮಾವತಿ ಬಡಾವಣೆಯಲ್ಲಿರುವ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಕೂಟದ ಎಲ್ಲಾ 12 ಅಭ್ಯರ್ಥಿಗಳು ಸಂಘದ ಹಾಲಿ ಅಧ್ಯಕ್ಷ ಕೆ.ಪುರುಷೋತ್ತಮ್ ಮತ್ತು ಪುರಸಭೆಯ ಮಾಜಿ ಅಧ್ಯಕ್ಷ ಕೆ.ಟಿ.ಚಕ್ರಪಾಣಿ ಅವರ ನೇತೃತ್ವದಲ್ಲಿ ಭರ್ಜರಿ ಸಾಧಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ.
ಕಾಂಗ್ರೆಸ್-ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿಗಳಾದ ಕೆ.ಟಿ.ಚಕ್ರಪಾಣಿ, ಕೆ.ಪುರುಷೋತ್ತಮ್, ಥಿಯೇಟರ್ ಚಂದ್ರಣ್ಣ, ರಾಜಾನಾಯಕ್, ಕೆ.ಎನ್.ಕಾಳೇಗೌಡ, ನಂದೀಶ್, ಹಿರೀಕಳಲೆ ಬಲರಾಂ, ತೇಗನಹಳ್ಳಿ ಟಿ.ಜೆ.ನಾಗೇಶ್, ಕೋಮಲಮಂಜೇಗೌಡ, ಗಂಗನಹಳ್ಳಿ ಗಂಗಾದೇವಿ, ಹಿರೀಕಳಲೆ ಹೆಚ್.ಜೆ.ಸೋಮಶೇಖರ್. ಯೋಗನಿಂಗಯ್ಯ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾಧಿಕಾರಿಯಾಗಿ ತಾಲ್ಲೂಕು ಸಹಕಾರ ಅಭಿವೃದ್ದಿ ಅಧಿಕಾರಿ ಹೆಚ್.ಬಿ.ಭರತ್ ಕುಮಾರ್, ಸಹ ಚುನಾವಣಾಧಿಕಾರಿಯಾಗಿ ಸಂಘದ ಸಿಇಓ ಬಿ.ಎನ್.ಕಾಂತರಾಜು ಕಾರ್ಯನಿರ್ವಹಿಸಿದರು.
ನೂತನ ನಿರ್ದೇಶಕರನ್ನು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು ಮಾತನಾಡ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಹಾಲಿ ಅಧ್ಯಕ್ಷರಾದ ಪುರುಷೋತ್ತಮ್ ನೇತೃತ್ವದಲ್ಲಿ ಅಭಿವೃದ್ಧಿಯ ದಿಕ್ಕಿನತ್ತ ಸಾಗುತ್ತಿದೆ. ಸುಮಾರು 3 ಕೋಟಿಗೂ ಹೆಚ್ಚು ವೆಚ್ಚದಿಂದ ನಿರ್ಮಿಸಲಾಗಿರುವ ಸಂಘದ ನೂತನ ಕಟ್ಟಡವನ್ನು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಅದ್ದೂರಿಯಾಗಿ ಉದ್ಘಾಟನೆ ಮಾಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಈಗ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಂಘದ ಎಲ್ಲಾ ಶೇರುದಾರರಿಗೆ ಶೂನ್ಯ ಬಡ್ಡಿ ದರದ ಸಾಲವನ್ನು ನೀಡಲು ಕ್ರಮ ವಹಿಸಬೇಕು. ಸಂಘದ ಬ್ಯಾಂಕಿಂಗ್ ಶಾಖೆಯನ್ನು ಇನ್ನೂ ಹೆಚ್ಚಿನ ವಹಿವಾಟು ನಡೆಸಲು ಕ್ರಮ ವಹಿಸಬೇಕು. ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಜನಸಾಮಾನ್ಯರಿಗೆ ಸಂಘದ ಎಲ್ಲಾ ಸೌಲಭ್ಯಗಳನ್ನು ಕೊಡಿಸಿಕೊಡಲು ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಶ್ರಮಿಸಬೇಕು ಎಂದು ಕೆ.ಆರ್.ರವೀಂದ್ರಬಾಬು ಸಲಹೆ ನೀಡಿದರು.
ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಪುರುಷೋತ್ತಮ್ ಮಾತನಾಡಿ, ನಮ್ಮ ತಂಡದ ಎಲ್ಲಾ ಗೆಲುವಿಗೆ ಸಹಕರಿಸಿದ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮುಖಂಡರಿಗೆ ಹಾಗೂ ಶೇರುದಾರರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಅಲ್ಲದೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಯ ದಿಕ್ಕಿನತ್ತ ತೆಗೆದುಕೊಂಡು ಹೋಗಲು ಎಲ್ಲಾ ನಿರ್ದೇಶಕರೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ನೂತನ ನಿರ್ದೇಶಕ ಕೆ.ಟಿ.ಚಕ್ರಪಾಣಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರು ಹಾಗೂ ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮುಖಂಡರ ಸಹಕಾರದೊಂದಿಗೆ ಶಕ್ತಿಮೀಡಿ ಶ್ರಮಿಸುವುದಾಗಿ ತಿಳಿಸಿದರು.
ನೂತನ ನಿರ್ದೇಶಕರನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹೀರೀಕಳಲೆ ಮಂಜುನಾಥ್, ಸಣ್ಣನಿಂಗೇಗೌಡ, ಹಿರೀಕಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಕೃಷ್ಣ, ಪುರಸಭೆಯ ಮಾಜಿ ಅಧ್ಯಕ್ಷ ಕೆ.ಟಿ.ಚಕ್ರಪಾಣಿ, ಕೆ.ಕೆ.ಪುರುಷೋತ್ತಮ್, ಪುರಸಭೆಯ ಮಾಜಿ ಸದಸ್ಯ ಕೆ.ವಿನೋದ್‌ಕುಮಾರ್, ರಾಜಾನಾಯಕ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಎನ್.ಮಂಜೇಗೌಡ, ತಾಲ್ಲೂಕು ಕನಕದಾಸ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಸ್.ಕುಮಾರ್, ಸಂಘದ ಮಾಜಿ ಅಧ್ಯಕ್ಷ ರಘು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.