ಕೆ ಆರ್ ಪೇಟೆ-ಪಿ‌ಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅವರಿಗೆ ಮನ್ಮುಲ್ ನಿರ್ದೇಶಕ ಡಾಲು ರವಿ ಅವರಿಂದ ಸನ್ಮಾನ

ಕೆ ಆರ್ ಪೇಟೆ: ಪಿ‌ಎಲ್‌ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ‌ ಪಿ‌ಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಬ್ಬಲಗೆರೆಪುರ ಪುಟ್ಟಸ್ವಾಮಿಗೌಡ ಅವರಿಗೆ ಮನ್ಮುಲ್ ನಿರ್ದೇಶಕ ಡಾಲು ರವಿ ಅವರ ತಮ್ಮ ನಿವಾಸದಲ್ಲಿ‌ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು.‌

ಬಳಿಕ ಮಾತನಾಡಿದ ಮನ್ಮುಲ್ ನಿರ್ದೇಶಕ ಡಾಲು ರವಿ ಅಧ್ಯಕ್ಷ ಉಪಾಧ್ಯಕ್ಷರಾದವರಿಗೆ ಸದಸ್ಯರಿಗಿಂತ ಹೆಚ್ಚಿನ ಜವಾಬ್ದಾರಿ ಹೊರಬೇಕಾಗುತ್ತದೆ.ರೈತರ ಜೀವನಾಡಿಯಾಗಿರುವ ಸಹಕಾರ ಸಂಘಗಳ‌ ಶ್ರೇಯೋಭಿದ್ದಿಗೆ ಬ್ಯಾಂಕ್ ನ ಎಲ್ಲಾ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಿಸುವಂತೆ ಸಲಹೆ ನೀಡಿದ್ದಲ್ಲದೇ ರೈತರಿಗೆ ಸಕಾಲಕ್ಕೆ ಸಾಲಸೌಲಭ್ಯಗಳನ್ನು ನೀಡಲು ಆಡಳಿತ ಮಂಡಳಿಯವರು ವ್ಯವಸ್ಥೆ ಮಾಡಬೇಕು.ಬ್ಯಾಂಕ್ ನ ಷೇರುದಾರರು ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಬೇಕಾಗುತ್ತದೆ.

ಸಹಕಾರ ಸಂಘಗಳು ವಾಣಿಜ್ಯ ಬ್ಯಾಂಕುಗಳಂತೆ ಕಾರ್ಯನಿರ್ವಹಿಸುವುದನ್ನು ನೋಡುತ್ತಿದ್ದೇವೆ. ಆದ್ದರಿಂದ ಪಿ‌ಎಲ್‌ಡಿ ಬ್ಯಾಂಕ್ ನ ಅಭಿವೃದ್ಧಿಗೆ ಷೇರುದಾರರು, ರೈತರು,ಆಡಳಿತ ಮಂಡಳಿಯವರು ವಿಶೇಷವಾದ ಗಮನ ಹರಿಸಿ ಬ್ಯಾಂಕ್ ನ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ರೂಪಿಸುವಂತೆ ಮನ್ಮುಲ್ ನಿರ್ದೇಶಕ ಡಾಲು ರವಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಿ‌ಎಲ್‌ಡಿ ಬ್ಯಾಂಕ್ ನಿರ್ದೇಶಕ ಮಾಳಗೂರು ಜಗದೀಶ್,ಶೀಳನೆರೆ ರಾಮೇಗೌಡ, ಮುಖಂಡರಾದ ಹಾದನೂರು ಪರಮೇಶ್, ಜಾಗಿನಕೆರೆ ಅಂಬರೀಶ್, ಕೈಗೋನಹಳ್ಳಿ ಜಯರಾಂ, ಮುರುಕನಹಳ್ಳಿ ರಮೇಶ್ ಸೇರಿದಂತೆ ಇತರರು ಹಾಜರಿದ್ದರು.

– ಶ್ರೀನಿವಾಸ್‌ ಆರ್.

Leave a Reply

Your email address will not be published. Required fields are marked *

× How can I help you?