ಕೆ ಆರ್ ಪೇಟೆ– ತಾಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ಆಡುನಿಂಗಣ್ಣನ ಬಿ.ಎಸ್. ರಾಮು, ಇಂಜಿನಿಯರ್ ( ಪ್ರಥಮ ದರ್ಜೆ ವಿದ್ಯುತ್ ಹಾಗೂ ಸಿವಿಲ್ ಗುತ್ತಿಗೆದಾರರು) ಅವರು ತಮ್ಮ ಪೋಷಕರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡರು.
ಬಲ್ಲೇನಹಳ್ಳಿ ಗ್ರಾಮದ ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಓದುವ ಎಲ್ಲ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಬಿ.ಎಸ್.ರಾಮು ಪಾವತಿಸಿದ್ದಾರೆ. ಅಂಗನವಾಡಿ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಇತರೆ ಲೇಖನ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಪಿಯುಸಿ ಓದುವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದ್ದಾರೆ. ಇದರಿಂದಾಗಿ ಬಲ್ಲೇನಹಳ್ಳಿ ಗ್ರಾಮದಲ್ಲಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳವಾಗಿದೆ ಇದಕ್ಕೆ ದಾನಿಗಳಾದ ಬಿ.ಎಸ್.ರಾಮು ಅವರ ಉದಾರ ಗುಣ ಕಾರಣವಾಗಿದೆ ಎಂದು ಪುರಸಭಾ ಸದಸ್ಯ ಕೆ.ಬಿ.ಮಹೇಶ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಬಲ್ಲೇನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ನಿರ್ದೇಶಕರಾದ ಬಿ.ಸಿ. ರಮೇಶ್, ಸೋಮು ಗೌಡರು ವಕೀಲರಾದ ಮಂಜುನಾಥ್ ಅವರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಅವರಿಗೆ ದೇವರು ಆಯಸ್ಸು, ಆರೋಗ್ಯ ಐಶ್ವರ್ಯ ಎಲ್ಲವನ್ನೂ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
- ಶ್ರೀನಿವಾಸ್ ಆರ್.