ಬೆಂಗಳೂರು:ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಪ್ರಜಾವಾಣಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದವೀರೇಶ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.
ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು
ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಮಂಜೂರು ಮಾಡಿದ್ದಾರೆ.
ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.