ಮಧುಗಿರಿ- ಎ.ಪಿ.ಎಂ.ಸಿ‌ನಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ- ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮನವಿ-ಸಹಕಾರ ಸಚಿವ ಕೆ.ಎನ್. ರಾಜಣ್ಣ

ಮಧುಗಿರಿ, ಮೇ 20 – ಮಧುಗಿರಿ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ 2025–26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ ಭಾನುವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್. ರಾಜಣ್ಣನವರು ಭಾಗವಹಿಸಿ ರೈತರಿಗೆ ಉದ್ದೇಶಿಸಿ ಭಾಷಣ ಮಾಡಿದರು.

ಸಚಿವರು ಮಾತನಾಡುವಾಗ, “ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಗೊಬ್ಬರವನ್ನು ಸಮರ್ಪಕವಾಗಿ ಮತ್ತು ಸಕಾಲದಲ್ಲಿ ವಿತರಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರೈತಾಪಿ ವರ್ಗದವರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಕೃಷಿಕ ಸಮಾಜದ ರಮೇಶ್, ಕೆ.ಪಿ.ಸಿ.ಸಿ ಸದಸ್ಯ ಮಲ್ಲಿಕಾರ್ಜುನಯ್ಯ, ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ, ತಹಸೀಲ್ದಾರ್ ಶಿರೀನ್ ತಾಜ್, ಡಿವೈಎಸ್‌ಪಿ ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಹನುಮಂತರಾಯಪ್ಪ, ಉಪ ಸಹಾಯಕ ನಿರ್ದೇಶಕ ಚಂದ್ರಕುಮಾರ್ ಸೇರಿದಂತೆ ಎ.ಪಿ.ಎಂ.ಸಿ ನಿರ್ದೇಶಕರು ಹಾಗೂ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *