ಮಂಡ್ಯ-ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ-ಡಾ. ಎಸ್.ಸಿ. ಸುರೇಶ್

ಮಂಡ್ಯ– ರಾಜ್ಯಾದ್ಯಂತ ಪಶು ಸಂಗೋಪಲನೆ ಇಲಾಖೆ ಏಪ್ರಿಲ್ 26 ರಿಂದ 7 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ. ಎಸ್.ಸಿ. ಸುರೇಶ್ ಹೇಳಿದರು.

ಗುರುವಾರ (ಏ.24) ರಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 4.79 ಲಕ್ಷ ಜಾನುವಾರುಗಳ ಇದ್ದು ಮನೆ ಮನೆಗೂ ಭೇಟಿ ನೀಡಿ ಲಸಿಕೆ ಹಾಕುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಮನ್ ಮುಲ್ ಸಹಯೋಗದೊಂದಿಗೆ ಕಾಲುಬಾಯಿ ಜ್ವರದ ಲಸಿಕೆ ನೀಡಲು ಈಗಾಗಲೇ 469 ಲಸಿಕಾದರರನ್ನು ನೇಮಿಸಲಾಗಿದೆ, ಸುಮಾರು ಒಂದುವರೆ ತಿಂಗಳೊಳಗೆ ಮನೆ ಮನೆ ತೆರಳಿ ಉಚಿತವಾಗಿ ಲಸಿಕೆ ಹಾಕುವ ಯೋಜನೆ ಕೈಗೊಂಡಿದ್ದೇವೆ, ಮನ್ ಮುಲ್ ಸಿಬ್ಬಂದಿ ವರ್ಗದವರು ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಹಾಗೂ ನಮಗೆ ಬೇಕಾದ ಎಲ್ಲಾ ಮೂಲ ಸೌಕರ್ಯಗಳನ್ನು ನೀಡಲು ಅನುಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.

ಜೊತೆಗೆ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರವನ್ನು ಹಾಲು ಉತ್ಪಾದಕ ಸಹಕಾರ ಸಂಘಗಳ ಮೂಲಕ ಪ್ರಚಾರ ಪಡಿಸಲು ನಿರ್ದೇಶನ ನೀಡಲಾಗಿದೆ, ಲಸಿಕಾ ದಾರರಿಗೆ ಪ್ರಯಾಣ ವೆಚ್ಚವನ್ನು ಮನ್ ಮುಲ್ ನೀಡಲಿದೆ ಎಂದು ತಿಳಿಸಿದರು.

ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಜೇಶ್ ಮಾತನಾಡಿ, ರಾಜ್ಯಾದ್ಯಂತ ಪಶು ಸಂಗೋಪನಾ ಇಲಾಖೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡು ಬಂದಿದೆ, ಜಿಲ್ಲೆಯಲ್ಲಿ ಈಗಾಗಲೇ 6 ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬದಿದ್ದಾರೆ, ಎಂದಿನಂತೆ ಮುಂದೆಯೂ ಮನ್ ಮುಲ್ ನಿರಂತರವಾಗಿ ಲಸಿಕಾ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.

ನಂತರ ಡಾ. ಎಸ್.ಸಿ ಸುರೇಶ್ ಮತ್ತು ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕ ಮಂಜೇಶ್ 7 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಪೋಸ್ಟರ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಉಪ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?