ಮಂಡ್ಯ:-ಮಕ್ಕಳ ಏಳಿಗೆಯಲ್ಲಿ ತಾಯಂದಿರ ಪಾತ್ರ ಅಪಾರವಾದುದು-ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು-ಶ್ರೀ ನಿರ್ಮ ಲಾನಂದನಾಥ ಸ್ವಾಮೀಜಿ

ಮಂಡ್ಯ:-ಮಕ್ಕಳ ಏಳಿಗೆಯಲ್ಲಿ ತಾಯಂದಿರ ಪಾತ್ರ ಅಪಾರವಾದುದು.ಅವರು ನಿಸ್ವಾರ್ಥ ಪ್ರೀತಿ, ತ್ಯಾಗ ಮತ್ತು ತಾಳ್ಮೆಯಿಂದ ಮಕ್ಕಳ ಬೆಳವಣಿಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಡುತ್ತಾ ರೆಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ವೈ.ಯರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಬೆಳ್ಳಿ ಸಭಾ ಭವನ ,ಜಯಚಾಮರಾಜೇಂದ್ರ ಒಡೆಯರ್, ಬಾಲಗಂಗಾಧರನಾಥ ಮಹಾಸ್ವಾಮೀಜಿ, ಸರ್‌ ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜ ಏಳಿಗೆಗೆ ಶ್ರಮಿಸಿದ ನಾಯಕರುಗಳ ಪ್ರತಿಮೆಗಳನ್ನ ಗ್ರಾಮದಲ್ಲಿ ಸ್ಥಾಪಿಸಿದ್ದರಷ್ಟೇ ಸಾಲದು ಯುವ ಜನಾಂಗ ಆ ಮಹನೀಯರ ಆದರ್ಶಗಳನ್ನು ಮೈಗೂಡಿಸಿ ಕೊಳ್ಳ ಬೇಕು.ತಪ್ಪು ದಾರಿಯಲ್ಲಿ ಹೋಗುವ ಮಕ್ಕಳನ್ನು ಬಾಲ್ಯದಲ್ಲಿಯೇ ಸರಿದಾರಿಗೆ ತರುವ ಪ್ರಯತ್ನಗಳಾಗಬೇಕು ಎಂದರು.

ಬಿಜೆಪಿ ಮುಖಂಡ ಸಚ್ಚಿದಾನಂದ ಇಂಡುವಾಳು ಮಾತನಾಡಿ, ಚುಂಚನಗಿರಿ ಮಠವನ್ನು ಚಿನ್ನದ ಗಿರಿ ಮಾಡಿದಂತಹ ಬಾಲಗಂಗಾಧರನಾಥ ಸ್ವಾಮೀಜಿ ಅವರು ಮಂಡ್ಯ ಜಿಲ್ಲೆ ಅಂದಿನ ಕಾಲದಲ್ಲಿಯೇ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವಂತೆ ಮಾಡಿದ್ದಾರೆ.ವಿದ್ಯಾ ಸಂಸ್ಥೆಗಳನ್ನು ತೆರೆದು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಗಿಡಗಳನ್ನು ನೆಡುವ ಮೂಲಕ ವೃಕ್ಷಾರಣ್ಯಗಳನ್ನು ಬೆಳೆಸಿರುವುದು ಅವರ ದೂರದೃಷ್ಟಿಗೆ ಹಿಡಿದ ಕೈಗನ್ನಡಿ ಎಂದು ಬಣ್ಣಿಸಿದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಶ್ರೀಮಠವು ಹೆಸರುವಾಸಿಯಾಗಿದೆ. ಜ್ಞಾನದ ವಿಷಯಕ್ಕೆ ಹೆಚ್ಚು ಒತ್ತು ನೀಡಿರುವ ಶ್ರೀಮಠವು ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ನೆರವಾಗಿರುವುದು ಮೆಚ್ಚುವ ಕೆಲಸ ಎಂದು ಶ್ಲಾಘಿಸಿದರು.

ಜಲ ಸಂಪನ್ಮೂಲ ಇಲಾಖೆಯ ಅಧೀಕ್ಷಕ ಎಂಜಿನಿಯರ್‌ ಸತೀಶ್‌, ಕಾರ್ಯಕ್ರಮ ಸಂಯೋಜಕ ಶಿವಕುಮಾರ್ ಯರಹಳ್ಳಿ, ಮುಖಂಡರಾದ ಪುಟ್ಟಸ್ವಾಮಿ, ದೇವೇಗೌಡ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

× How can I help you?