ಮಂಡ್ಯ.– ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಇಂದು ಜಿಲ್ಲಾ ಪಂಚಾಯತ್ ಹತ್ತಿರ ಇರುವ ಶ್ರೀ. ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ
ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಚಾಮುಂಡೇಶ್ವರಿ ನಗರದಲ್ಲಿರುವ ಡಾ: ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ನಿಲಯ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಡುಗೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಸಿದ್ಧಪಡಿಸಿವಿರುವ ಉಪಹಾರದ ಬಗ್ಗೆ ಮಾಹಿತಿ ಪಡೆದು ಕೊಂಡು ವಿದ್ಯಾರ್ಥಿಗಳಿಗೆ ಶುಚಿ ಹಾಗೂ ರುಚಿಯಾದ ಆಹಾರ ನೀಡಬೇಕು ಎಂದ ಅವರು ಹಾಜರಿದ್ದ ವಿದ್ಯಾರ್ಥಿಗಳ ಬಳಿ ಮೆಸ್ ಸಮಿತಿ ರಚನೆಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಮೆಸ್ ಸಮಿತಿಯು ಪ್ರತಿ ದಿನ ಆಹಾರ ಸಾಮಗ್ರಿಗಳನ್ನು ಅಡುಗೆ ಮಾಡುವ ಸಿಬ್ಬಂದಿಗಳಿಗೆ ನೀಡುವಾಗ ಪರಿಶೀಲನೆ ನಡೆಸಬೇಕು. ಯಾವುದೇ ತೊಂದರೆ ಇದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಅಡುಗೆ ತಯಾರಿಸುವ ಸಿಬ್ಬಂದಿಗಳು, ಸ್ವಚ್ಛತಾ ಸಿಬ್ಬಂದಿಗಳ ಜೊತೆ ಮಾತನಾಡಿ ಪ್ರತಿ ಮಾಹೆ ಸಂಬಳ ದೊರಕುತ್ತಿರುವ ಬಗ್ಗೆ ಖಾತ್ರಿ ಪಡೆಸಿಕೊಂಡರು. ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದ ಅವರು ಖುದ್ದು ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು.
ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳು ಹಾಗೂ ಚಳಿಗಾಲದಲ್ಲಿ ಗೀಸರ್ ಅವಶ್ಯಕತೆ ಇದ್ದು, ಈ ಕುರಿತಂತೆ ಜಿಲ್ಲಾ ಪಂಚಾಯತ್ ಅಥವಾ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಇದರ ಜೊತೆಯಲ್ಲಿ ಇಂಜಿನಿಯರಿAಗ್ ಹಾಗೂ ವೃತ್ತಿಪರ ಕೋಸ್9ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಾಲಾತಿ ಎರಡು ಹಾಸ್ಟಲ್ ಗಳಲ್ಲಿ ಹೆಚ್ಚಿದ್ದು, ಶೌಚಾಲಯಗಳ ಅವಶ್ಯಕತೆ ಇದ್ದು, ಈ ಕುರಿತಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಹಾಜರಾತಿ ಹಾಗೂ ಸ್ಟಾಕ್ ರಿಜಿಸ್ಟರ್ ಗಳನ್ನು ಸಹ ವೀಕ್ಷಿಸಿದರು.
ಪರಿಶೀಲನೆ ವೇಳೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜರ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು .